Publish Date: Wed, 13 Jun 2018 (09:59 IST)
Updated Date: Wed, 13 Jun 2018 (10:00 IST)
ನವದೆಹಲಿ: ಅನಾರೋಗ್ಯಕ್ಕೊಳಗಾಗಿ ಎರಡು ದಿನಗಳ ಹಿಂದೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನೂ ಬಿಡುಗಡೆಯಾಗಿಲ್ಲ.
ಕಿಡ್ನಿ ಮತ್ತು ಶ್ವಾಸಕೋಶ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದ ವಾಜಪೇಯಿಗೆ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ. ಸೋಂಕು ನಿವಾರಣೆಯಾಗಲು ಆಂಟಿ ಬಯೋಟಿಕ್ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ವಾಜಪೇಯಿ ಚೇತರಿಕೆಗಾಗಿ ದೇಶದಾದ್ಯಂತ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಇನ್ನೊಂದೆಡೆ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.