Select Your Language

Notifications

webdunia
webdunia
webdunia
webdunia

ಪಂಚಭೂತಗಳಲ್ಲಿ ಲೀನವಾದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್‌: ಪುತ್ರಿಯಿಂದ ಅಗ್ನಿಸ್ಪರ್ಶ

Former Prime Minister Dr. Manmohan Singh

Sampriya

ನವದೆಹಲಿ , ಶನಿವಾರ, 28 ಡಿಸೆಂಬರ್ 2024 (14:51 IST)
Photo Courtesy X
ನವದೆಹಲಿ: ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ಇಂದು ದೆಹಲಿಯ ನಿಗಮ ಬೋಧ್ ಘಾಟ್‌ನಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಮತ್ತು ಸಿಖ್ ಧರ್ಮದ ಸಂಪ್ರದಾಯದಂತೆ ಅವರ ಅಂತಿಮ ಸಂಸ್ಕಾರ ನೆರವೇರಿತು.

ಮನಮೋಹನ್ ಸಿಂಗ್ ಅವರ ಪುತ್ರಿ ತಮ್ಮ ತಂದೆಯ ಚಿತೆಗೆ ಅಗ್ಮಿ ಸ್ಪರ್ಶ ಮಾಡಿದರು. ಈ ವೇಳೆ ಉಪಸ್ಥಿತರಿದ್ದ ನಾಯಕರು ಕಂಬನಿ ಮಿಡಿದು ಅಗಲಿದ ನಾಯಕನಿಗೆ ಅಂತಿಮ ಗೌರವ ಸಲ್ಲಿಕೆ ಮಾಡಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನವದೆಹಲಿಯ ಸ್ವಗೃಹದಿಂದ ಕಾಂಗ್ರೆಸ್‌ನ ಪ್ರಧಾನ ಕಚೇರಿಗೆ ಪಾರ್ಥಿವ ಶರೀರವನ್ನು ಕರೆ ತಂದ ಬಳಿಕ ಅಲ್ಲಿ ಅವರಿಗೆ ಅಂತಿಮ ಗೌರವ ಸಲ್ಲಿಸಲಾಯಿತು. ಆ ಬಳಿಕ ನಿಗಮಬೋಧ್ ಘಾಟ್‌ಗೆ ಅಂತಿಮ ಯಾತ್ರೆಯನ್ನು ಸಾವಿರಾರು ಮಂದಿಯ ಸಮ್ಮುಖದಲ್ಲಿ ಕರೆತರಲಾಯಿತು. ಪಾರ್ಥೀವ ಶರೀರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಹೆಗಲು ಕೊಟ್ಟರು.

ಮನಮೋಹನ್ ಸಿಂಗ್ ಅವರಿಗೆ ಅಂತಿಮ ವಿದಾಯ ಹೇಳಲು ದೆಹಲಿಯ ನಿಗಮಬೋಧ್ ಘಾಟ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿವಿಧ ರಾಜ್ಯಗಳ ಸಿಎಂಗಳು ಸಹಿತ ಕೇಂದ್ರ ಸಚಿವರುಗಳು, ಕಾಂಗ್ರೆಸ್‌ ನಾಯಕರುಗಳು ಹಾಜರಿದ್ದರು. ಈ ಎಲ್ಲಾ ನಾಯಕರು ಅಗಲಿದ ನಾಯಕನಿಗೆ ಪುಷ್ಪ ನಮನ ಸಲ್ಲಿಸಿದರು.

 ನಿಗಮಬೋಧ್ ಘಾಟ್‌ಗೆ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರ ತಲುಪಿದ ಬಳಿಕ ಅಲ್ಲಿ ಅವರಿಗೆ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ಯಾತ್ರೆಯ ವೇಳೆ ಬಂದಿದ್ದ ಲಕ್ಷಾಂತರ ಮಂದಿ ನಿಗಮಬೋಧ್ ಘಾಟ್‌ನ ಹೊರಭಾಗದಲ್ಲಿ ನರೆದಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ನಾಗರಿಕರಿಗೆ ಸಿಹಿ ಸುದ್ದಿ: ಹೊಸ ವರ್ಷಾಚರಣೆಗಾಗಿ ಮೆಟ್ರೋ ರೈಲು ಸೇವೆಯ ಅವಧಿ ವಿಸ್ತರಣೆ