ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಕಳೆದ 6 ತಿಂಗಳಿನಿಂದ ಜೈಲಿನಲ್ಲಿದ್ದ ಆಪ್ ಸಂಸದ ಸಂಜಯ್ ಸಿಂಗ್‌ಗೆ ಅವರಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
ದೆಹಲಿ ಅಬಕಾರಿ ನೀತಿ ಕೇಸ್‌ನಲ್ಲಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಬಂಧಿತರಾಗಿದ್ದ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಲೋಕಸಭೆ ಚುನಾವಣೆಗೂ ಮುನ್ನ ಅವರ ಬಿಡುಗಡೆ ಮಾಡಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪಿಬಿ ವರಾಲೆ ಅವರ ಪೀಠವು ಆರು ತಿಂಗಳಿನಿಂದ ಜೈಲಿನಲ್ಲಿರುವ ಸಂಜಯ್ ಸಿಂಗ್ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ.
ದಿಲ್ಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ಸಿಂಗ್ ಅವರನ್ನು ಅಕ್ಟೋಬರ್ 4, 2023 ರಂದು ಇಡಿ ಬಂಧಿಸಿತ್ತು. ಇಡಿಯಿಂದ ಅವರ ಮೇಲೆ ಪ್ರಾಸಿಕ್ಯೂಷನ್ ದೂರು ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಮಾಜಿ ಡಿಸಿಎಂ ಮನೀಷ್ ಸಿಸೋಡಿಯಾ ಕೂಡ ಇಡಿ ಬಂಧನಲ್ಲಿದ್ದಾರೆ.