ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ಬುಧವಾರ ಬಂಧಿಸಿದೆ.
ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಇದಕ್ಕೆ ಕೆಲವೇ ಗಂಟೆಗಳ ಮುಂಚೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನೊಳಗೆ ಅರವಿಂದ ಕೇಜ್ರಿವಾಲ್ ಅವರನ್ನು ಸಿಬಿಐನಿಂದ ಬಂಧಿಸಲಾಯಿತು.
ಕಳೆದ ವಾರ ರೋಸ್ ಅವೆನ್ಯೂ ಕೋರ್ಟ್ ದೆಹಲಿ ಸಿಎಂಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಇಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಜಾಮೀನು ನೀಡಿ ಅವೆನ್ಯೂ ಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.<>