Select Your Language

Notifications

webdunia
webdunia
webdunia
webdunia

ಅಬಕಾರಿ ನೀತಿ : ಆರೋಪಿಗಳ ವಿರುದ್ಧ ಸಿಬಿಐ ಲುಕ್ಔಟ್ ನೋಟಿಸ್

ಅಬಕಾರಿ ನೀತಿ : ಆರೋಪಿಗಳ ವಿರುದ್ಧ ಸಿಬಿಐ ಲುಕ್ಔಟ್ ನೋಟಿಸ್
ನವದೆಹಲಿ , ಸೋಮವಾರ, 22 ಆಗಸ್ಟ್ 2022 (09:13 IST)
ನವದೆಹಲಿ : ಎರಡು ದಿನಗಳ ಹಿಂದೆಯಷ್ಟೇ ಸಿಬಿಐ ದಾಳಿಗೆ ಒಳಗಾಗಿದ್ದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ.
 
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಲಾದ ವ್ಯಕ್ತಿಗಳ ಪಟ್ಟಿಯಲ್ಲಿರುವ ಮನೀಶ್ ಸಿಸೋಡಿಯಾ ಹಾಗೂ ಇತರೆ 8 ಮಂದಿ ವಿರುದ್ಧ ಇಂದು ಲುಕ್ಔಟ್ ನೋಟಿಸ್ ಹೊರಡಿಸಿದೆ. ಜೊತೆಗೆ ಸಿಸೋಡಿಯಾ ವಿದೇಶ ಪ್ರಯಾಣ ಮಾಡದಂತೆ ಸಿಬಿಐ ನಿರ್ಬಂಧ ವಿಧಿಸಿದೆ. 

8 ಖಾಸಗಿ ಆರೋಪಿಗಳ ವಿರುದ್ಧವಷ್ಟೇ ಲುಕ್ಔಟ್ ನೋಟೀಸ್ ಹೊರಡಿಸಲಾಗಿದೆಯೇ ಹೊರತು ನಾಲ್ವರು ಸಮಾಜ ಸೇವಕರ ವಿರುದ್ಧ ಅಲ್ಲ. ಸಮಾಜ ಸೇವಕರು ದೇಶ ಬಿಟ್ಟು ಹೋಗುವುದಿಲ್ಲವಾದ್ದರಿಂದ ಅವರ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸುವ ಅವಶ್ಯಕತೆ ಸದ್ಯಕ್ಕಿಲ್ಲ ಎಂದೂ ಸಿಬಿಐ ಸ್ಪಷ್ಟನೆ ನೀಡಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ವಿಮಾನದಲ್ಲಿ ಹೊಗೆ ಎಚ್ಚರಿಕೆ!