Select Your Language

Notifications

webdunia
webdunia
webdunia
webdunia

ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ವಿಸ್ತರಣೆ

ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ವಿಸ್ತರಣೆ
ನವದೆಹಲಿ , ಗುರುವಾರ, 20 ಜನವರಿ 2022 (07:07 IST)
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ, ಕಳೆದ ಎರಡು ವರ್ಷದಿಂದ ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು 2022ರ ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ.

ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಹೊರಡಿಸಿರುವ ಆದೇಶದ ಪ್ರಕಾರ, ಕೊರೊನಾ ಪ್ರಕರಣ ವಿಶ್ವದಲ್ಲಿ ಮತ್ತೆ ಹೆಚ್ಚಾಗುತ್ತಿರುವುದರಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು 2022, ಫೆಬ್ರವರಿ 28ರ ವರೆಗೆ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಇಂದು ಅಧಿಸೂಚನೆ ಹೊರಡಿಸಿದೆ.

ಕೊರೊನಾ ಮೂರನೇ ಅಲೆ ಭಾರತದಲ್ಲಿ ಈಗಾಗಲೇ ಕಾಣಿಸಿಕೊಂಡಿರುವುದರಿಂದ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆ ವಿಧಿಸಿದ ನಿರ್ಬಂಧ ವಿಸ್ತರಿಸಲು ನಿರ್ಧರಿಸಿದ್ದು, ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ನಿಗದಿತ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ಈ ನಿರ್ಬಂಧವೂ, ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯ ಪ್ರಿಯರೇ ಗುಡ್ ನ್ಯೂಸ್!