Publish Date: Sat, 04 Sep 2021 (11:01 IST)
Updated Date: Sat, 04 Sep 2021 (10:04 IST)
ಮುಂಬೈ: ಮಹಾರಾಷ್ಟ್ರದ ಬೋಯಿಸಾರ್ನ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೋಯಿಸಾರ್ ಕೈಗಾರಿಕಾ ಪ್ರದೇಶದಲ್ಲಿ ಸ್ಥಿತಗೊಂಡಿರುವ ಜಖರಿಯಾ ಫ್ಯಾಬ್ರಿಕ್ ಲಿಮಿಟೆಡ್ನಲ್ಲಿ ಶನಿವಾರ ಬೆಳಗ್ಗೆ 6 ಗಂಟೆ ವೇಳೆಗೆ ಸ್ಫೋಟ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸಿದ್ದಾರೆ. ಸ್ಫೋಟದಿಂದಾಗಿ ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ತಕ್ಷಣಕ್ಕೆ ಘಟನೆ ಹಿಂದಿನ ಕಾರಣಗಳು ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.