ನವದೆಹಲಿಯ ಚಾಂದಿನಿ ಚೌಕ್ ಬಳಿ ನಡೆದ ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉತ್ತರ ದೆಹಲಿಯ ಚಾಂದಿನಿ ಚೌಕ ಬಳಿಯಿರುವ ನಯಾ ಬಜಾರ್‌ನಲ್ಲಿ ಇಂದು ಬೆಳಿಗ್ಗೆ 10.30 ಗಂಟೆಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಮೃತನಾದ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ಭಯೋತ್ಪಾದನೆ ನಿಗ್ರಹ ದಳ ಮತ್ತು ವಿಶೇಷ ತನಿಖಾ ದಳ ಘಟನಾ ಸ್ಥಳಕ್ಕೆ ಧಾವಿಸಿದ್ದು, ಅಪರಾಧ ಮತ್ತು ಫೋರೆನ್ಸಿಕ್ ತಂಡಗಳು ಕೂಡಾ ತನಿಖೆ ಕೈ ಗೆತ್ತಿಕೊಂಡಿವೆ ಎಂದು ಮೂಲಗಳು ತಿಳಿಸಿವೆ.
ಸ್ಫೋಟದ ಬಗ್ಗೆ ಹಿರಿಯ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ