ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಸ್ಸಾಂ ಮತ್ತು ಕೇರಳ ರಾಜ್ಯಗಳಲ್ಲಿ ಇತಿಹಾಸ ಸೃಷ್ಟಿಸಿದ ನಂತರ ಮುಂಬರುವ 2018ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ದತೆ ನಡೆಸಿದೆ.
ಬಿಹಾರ್ ಮತ್ತು ದೆಹಲಿ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಹೀನಾಯ ಸೋಲನುಭವಿಸಿದ ನಂತರ ಚುನಾವಣಾ ರಣತಂತ್ರ ಬದಲಿಸಿಕೊಂಡಿರುವ ಬಿಜೆಪಿ ಪಕ್ಷದ ಅಧ್ಯಕ್ಷ ಅಮಿತ್ ಶಾ, ಮೇ 19 ರಂದು ಪ್ರಕಟವಾದ ಐದು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಿಜೆಪಿ ಮತ್ತು ಅದರ ಮೈತ್ರಿಕೂಟ ಆಸ್ಸಾಂ ರಾಜ್ಯದಲ್ಲಿನ ಕಾಂಗ್ರೆಸ್ ಅಧಿಕಾರವನ್ನು ನುಚ್ಚು ನೂರಾಗಿಸಿ ಅಧಿಕಾರದ ಗದ್ದುಗೆ ಹಿಡಿಯಲು ಸಿದ್ದತೆ ನಡೆಸಿದೆ. ಮೊದಲ ಬಾರಿಗೆ ಈಶಾನ್ಯ ರಾಜ್ಯದಲ್ಲಿ ಬಿಜೆಪಿ ಸರಕಾರ ರಚಿಸಿ ಇತಿಹಾಸ ಸೃಷ್ಟಿಸಿದೆ.
ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯಗಳಲ್ಲಿ ಬಿಜೆಪಿ ಪ್ರಭಾವದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಕಂಡಿರುವುದು ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡ ಪಕ್ಷಗಳು ಸೋಲನುಭವಿಸುತ್ತವೆ ಎನ್ನುವುದಕ್ಕೆ ಇತ್ತೀಚೆಗೆ ನಡೆದ ವಿಧಾಸಭೆ ಚುನಾವಣೆಗಳು ಸಾಕ್ಷಿಯಾಗಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.