Select Your Language

Notifications

webdunia
webdunia
webdunia
Wednesday, 9 April 2025
webdunia

ರಾಹುಲ್ ಗಾಂಧಿ ವಿರುದ್ಧ ಅಶ್ಲೀಲ ಪದ ಬಳಸಿದ ಬಿಜೆಪಿ ರಾಜ್ಯಾಧ್ಯಕ್ಷ

ಲೋಕಸಭೆ ಚುನಾವಣೆ 2019
ನವದೆಹಲಿ , ಸೋಮವಾರ, 15 ಏಪ್ರಿಲ್ 2019 (16:08 IST)
ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ರಾಜ್ಯಾಧ್ಯಕ್ಷನೊಬ್ಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅತ್ಯಂತ ಕೀಳುಮಟ್ಟದ ಪದ ಬಳಕೆ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಹಿಮಾಚಲ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷ ಸತ್ಪಾಲ್ ಸಿಂಗ್, ಚೌಕಿದಾರ್ ಚೋರ್ ಹೈ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ರಾಹುಲ್ ಗಾಂಧಿ ತಾಯಿ ಸೋನಿಯಾ ಗಾಂಧಿ ವಿರುದ್ಧ ಅಶ್ಲೀಲ, ಅತ್ಯಂತ ಕೀಳುಮಟ್ಟದ ಪದ ಬಳಕೆ ಮಾಡಿರುವುದು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.
 
ಶಿಮ್ಲಾ ಲೋಕಸಭೆ ಕ್ಷೇತ್ರದ ಬಡ್ಡಿ ಪಟ್ಟಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸತ್ಪಾಲ್, ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಚೋರ್ ಎನ್ನಬಹುದಾದರೇ ನಾವು ಅವರ ವಿರುದ್ಧ ಅಶ್ಲೀಲ ಪದ ಬಳಸುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಾಬರ್ಟ್ ವಾದ್ರಾ ಬೇಲ್ ಮೇಲಿದ್ದಾರೆ. ಆದಾಗ್ಯೂ ಪ್ರಧಾನಮಂತ್ರಿಯನ್ನು ಚೋರ್ ಎನ್ನುತ್ತಾರೆ. ಒಂದು ವೇಳೆ ಪ್ರಧಾನಿ ಮೋದಿ ಚೋರ್ ಆದರೆ, ನೀನು..... ಎಂದಿರುವ ವಿಡಿಯೋ ಇದೀಗ ವೈರಲ್ ಆಗಿದೆ. 
 
ಹಿಮಾಚಲ ಪ್ರದೇಶದ ಕಾಂಗ್ರೆಸ್ ಪಕ್ಷದ ವಕ್ತಾರರಾದ ನರೇಶ್ ಚೌಹಾನ್ ಮಾತನಾಡಿ, ಪಕ್ಷದ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದ್ದು ಶೀಘ್ರದಲ್ಲಿಯೇ ದೂರು ನೀಡಲಾಗುವುದು. ಚುನಾವಣೆ ಆಯೋಗಕ್ಕೂ ವಿಡಿಯೋ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.
 
ಹಿರಿಯ ರಾಜಕಾರಣಿಯಿಂದ ಇಂತಹ ಕೆಟ್ಟ ಶಬ್ದಗಳ ಬಳಕೆ ನಿರೀಕ್ಷಿಸಿರಲಿಲ್ಲ ಎಂದು ಹಿಮಾಚಲ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಕುಲದೀಪ್ ರಾಠೋರ್ ಬೇಸರ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಾಯಿಯ ಎದುರೇ ಪುತ್ರಿಯ ಮೇಲೆ ಗ್ಯಾಂಗ್‌ರೇಪ್