Daily Horoscope

ಸುಳ್ಳು ಜಾಹೀರಾತು ಪ್ರಕರಣ: ಸುಪ್ರೀಂ ಮುಂದೆ ಹಾಜರಾದ ರಾಮದೇವ್, ಬಾಲಕೃಷ್ಣ

Sampriya
ಮಂಗಳವಾರ, 2 ಏಪ್ರಿಲ್ 2024 (14:12 IST)
Photo Courtesy X
ನವದೆಹಲಿ: ಸುಳ್ಳು ಜಾಹೀರಾತು ಪ್ರಕರಣ ಸಂಬಂಧ ಯೋಗ ಗುರು ಬಾಬಾ ರಾಮದೇವ್‌ ಹಾಗೂ ಪತಂಜಲಿ ಆಯುರ್ವೇದ ಕಂಪನಿಯ ಎಂಡಿ ಆಚಾರ್ಯ ಬಾಲಕೃಷ್ಣ ಅವರು ಇಂದು ಸುಪ್ರೀಂಕೋರ್ಟ್‌ ಎದುರು ಹಾಜರಾದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಿಸಲು ನೋಟಿಸ್ ನೀಡಿದ್ದರೂ ನಿರ್ಲಕ್ಷಿಸಿದ್ದ ಈ ಇಬ್ಬರೂ ಕೋರ್ಟ್ ಮುಂದೆ ಖುದ್ದು ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ತಾಕೀತು ಮಾಡಿತ್ತು. ಹೀಗಾಗಿ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾನುದ್ದೀನ್‌ ಅಮಾನುಲ್ಲಾ ಅವರ ಪೀಠದ ಮುಂದೆ ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಹಾಜರಾಗಿದ್ದಾರೆ.

ರಾಮದೇವ್‌ ಹಾಗೂ ಬಾಲಕೃಷ್ಣ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇವರ ವಿರುದ್ಧ ಏಕೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬಾರದು ಎಂದು ಪೀಠ ಮಾರ್ಚ್ 19ರಂದು ಕೇಳಿತ್ತು. ನ್ಯಾಯಾಂಗ ನಿಂದನೆ ದಾಖಲಿಸುವ ಬಗ್ಗೆ ಬಾಬಾ ರಾಮದೇವ್ ಅವರಿಗೆ ಪೀಠ ಶೋಕಾಸ್ ನೋಟಿಸ್ ಅನ್ನೂ ಜಾರಿಗೊಳಿಸಿತ್ತು.

ಕೋರ್ಟ್‌ಗೆ ಅವರು ಹಾಜರಾದ ವೇಳೆ ಅವರು ಬೇಷರತ್ ಕ್ಷಮೆ ಕೇಳಿದರು ಎಂದು ವರದಿಯಾಗಿದೆ. ಏಪ್ರಿಲ್ 10ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

ವಿವಿಧ ಕಾಯಿಲೆಗಳ ಚಿಕಿತ್ಸೆ ಸಂಬಂಧ ಪತಂಜಲಿಯು ತನ್ನ ಉತ್ಪನ್ನಗಳ ಕುರಿತು ಸುಳ್ಳು ಮತ್ತು ತಪ್ಪುದಾರಿಗೆಳೆಯುವ ಜಾಹೀರಾತು ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಪ್ರಕರಣ ದಾಖಲಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments