ಪ್ರಯಾಗ್‌ರಾಜ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕುಟುಂಬ ಸಹಿತರಾಗಿ ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಭಾಗಿಯಾಗಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ.
ಕೇಂದ್ರ ಸಚಿವರೊಂದಿಗೆ ಅವರ ಪತ್ನಿ ಜ್ಯೋತಿ ಜೋಶಿ, ಮಕ್ಕಳಾದ ಅರ್ಪಿತಾ ಜೋಶಿ, ಅನನ್ಯಾ ಜೋಶಿ, ಅನುಷಾ ಜೋಶಿ ಹಾಗೂ ಸಹೋದರ ಗೋವಿಂದ ಜೋಶಿ-ಕಮಲಾ ಜೋಶಿ ದಂಪತಿ ಸೇರಿದಂತೆ ಕುಟುಂಬದ ಸದಸ್ಯರು ಪುಣ್ಯಸ್ನಾನ ಮಾಡಿದರು.
ಗಂಗೆಯಲ್ಲಿ ತೀರ್ಥಸ್ನಾನ ಮಾಡಿದ ಸಚಿವರು, ಮಂತ್ರ ಪಠಣದೊಂದಿಗೆ ದೇವರಿಗೆ ನಮಸ್ಕರಿಸಿದರು. ಬಳಿಕ ಕುಟುಂಬ ಸಮೇತರಾಗಿ ವಿಶಿಷ್ಠ ಭಂಗಿಯ ಭಗವಾನ್ ಹನುಮ ದೇವಾಲಯ ಹಾಗೂ ಅಕ್ಷಯವತ್‌ಗೆ ತೆರಳಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ತ್ರಿವೇಣಿ ಸಂಗಮದಲ್ಲಿ ಇಂದು ಕುಟುಂಬ ಸಹಿತ ಪಾಲ್ಗೊಂಡು ಪವಿತ್ರ ಸ್ನಾನ ಮಾಡುವ ಸುವರ್ಣ ಅವಕಾಶ ಲಭ್ಯವಾಗಿದ್ದು ನಮ್ಮ ಪುಣ್ಯ. ಇದು ನಮಗೆ ಅತ್ಯಂತ ಮಹತ್ವದ ಮತ್ತು ಭಕ್ತಿ ಸಮರ್ಪಣೆಯ ದೈವಿಕ ಕ್ಷಣವಾಗಿದೆ ಎಂದು ಎಂದು ಪ್ರಹ್ಲಾದ್ ಜೋಶಿ ಅವರು ಖುಷಿಪಟ್ಟರು.