Select Your Language

Notifications

webdunia
webdunia
webdunia
webdunia

ಖ್ಯಾತ ಗಾಯಕಿ ನಿರ್ಮಲಾ ಮಿಶ್ರಾ ವಿಧಿವಶ

ಕೋಲ್ಕತ್ತಾ
ಕೋಲ್ಕತ್ತಾ : ಖ್ಯಾತ ಹಿರಿಯ ಬೆಂಗಾಲಿ ಮತ್ತು ಒಡಿಯಾ ಗಾಯಕಿ ನಿರ್ಮಲಾ ಮಿಶ್ರಾ(81) ಅವರು ಹೃದಯಾಘಾತದಿಂದ ಭಾನುವಾರ ಮುಂಜಾನೆ ಚೆಟ್ಲಾ ಪ್ರದೇಶದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ನಿರ್ಮಲಾ ಮಿಶ್ರಾ ಅವರು ಹಲವಾರು ಬೆಂಗಾಲಿ ಮತ್ತು ಒಡಿಯಾ ಚಲನಚಿತ್ರಗಳ ಹಾಡುಗಳಿಗೆ ತಮ್ಮ ಧ್ವನಿಯನ್ನು ನೀಡಿದ್ದಾರೆ. ಕೆಲವು ಸಮಯದಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.

ಆದರೆ ಭಾನುವಾರ ಮಧ್ಯರಾತ್ರಿ 12.05ರ ಸುಮಾರಿಗೆ ನಿರ್ಮಲಾ ಮಿಶ್ರಾ ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಸಮೀಪದ ನರ್ಸಿಂಗ್ ಹೋಮ್ಗೆ ಕರೆದೊಯ್ಯಲಾಯಿತು. ಈ ವೇಳೆ ನಿರ್ಮಲಾ ಮಿಶ್ರ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಮೋದಿಗೆ 6ರ ಬಾಲಕಿ ಪತ್ರ : ಆ ಪತ್ರದಲ್ಲಿ ಏನಿದೆ?