ನವದೆಹಲಿ : ಸಾಲಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಸಿಹಿಸುದ್ಧಿ ಸಿಗುವುದಾಗಿ ಭರವಸೆಯಲ್ಲಿದ್ದ ರೈತರಿಗೆ ಇದೀಗ ಮೋದಿ ಸರ್ಕಾರ ನಿರಾಸೆ ಮೂಡಿಸಿದೆ.
ಹೌದು. ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭಾರೀ ಹಿನ್ನಡೆ ಸಾಧಿಸಿದ ಹಿನ್ನಲೆಯಲ್ಲಿ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡುವ ನಿರ್ಧಾರ ಮಾಡಬಹುದೆಂದು ಭಾವಿಸಲಾಗಿತ್ತು. ಆದರೆ ಅದೀಗ ಹುಸಿಯಾಗಿದೆ.
ಈ ಬಗ್ಗೆ ಲೋಕಸಭಾ ಸದನದಲ್ಲಿ ಲಿಖಿತ ರೂಪದಲ್ಲಿ ಸ್ಪಷ್ಟನೆ ನೀಡಿದ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವ ಪುರುಷೋತ್ತಮ್ ರೂಪಾಲಾ,’ಸರ್ಕಾರ ರೈತರ ಆದಾಯ ಹೆಚ್ಚಿಸಲು ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದ್ದರಿಂದ ರೈತರ ಸಾಲಮನ್ನಾ ಮಾಡುವುದು ದೇಶದ ಆರ್ಥಿಕತೆಗೆ ಒಳ್ಳೆಯದಲ್ಲ. ಇದರಿಂದ ಬ್ಯಾಂಕ್‍ಗಳ ಮೇಲಿನ ಹೊರೆಯೂ ಹೆಚ್ಚಾಗುತ್ತದೆ. ಹೀಗಾಗಿ ರೈತರ ಸಾಲಮನ್ನಾ ಮಾಡುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇಲ್ಲ’ ಎಂದು ಸ್ಪಷ್ಟ ಪಡಿಸಿದ್ದಾರೆ.
‘ರೈತರ ಸಾಲಮನ್ನಾ ಮಾಡಿದರೆ ಅವರು ಅದನ್ನೇ ಅಭ್ಯಾಸ ಮಾಡಿಕೊಳ್ಳುತ್ತಾರೆ. ಮತ್ತೆ ಮತ್ತೆ ಸಾಲಮನ್ನಾ ಮಾಡಲು ಬೇಡಿಕೆ ಹೆಚ್ಚಾಗುತ್ತದೆ. ಮುಂದಿನ ದಿನಗಳಲ್ಲಿ ಈ ರೀತಿಯ ಬೇಡಿಕೆಯನ್ನು ತಿರಸ್ಕರಿಸುವುದು ಕಷ್ಟವಾಗುತ್ತದೆ. ಅಷ್ಟೇ ಅಲ್ಲದೇ ಇದರಿಂದಾಗಿ ಬ್ಯಾಂಕ್ ಮೇಲಿನ ಒತ್ತಡ ಹೆಚ್ಚಾಗುತ್ತದೆ’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.