ಚಂಡೀಗಢ : ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಒಂದು ವರ್ಷಕ್ಕೂ ಅಧಿಕ ಅವಧಿ ಪ್ರತಿಭಟನೆ ನಡೆಸಿ ದೇಶದ ಗಮನ ಸೆಳೆದಿದ್ದ ರೈತ ಸಂಘಟನೆಗಳು ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆ ಅಖಾಡಕ್ಕೆ ಧುಮುಕಲು ನಿರ್ಧರಿಸಿವೆ.
ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ ರೈತ ನಾಯಕ ಬಲಬೀರ್ ಸಿಂಗ್ ರಾಜೇವಾಲ್ ಅವರು ಎಸ್ಎಸ್ಎಂ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸುವ ಸಾಧ್ಯತೆ ಇದೆ.
ನಿನ್ನೆ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಸ್ಪರ್ಧೆ ಘೋಷಣೆ ಮಾಡಿದ ರೈತ ನಾಯಕ ಬಲದೇವ ಸಿಂಗ್, ಪಂಜಾಬ್ಗೆ ನಮ್ಮ ರಂಗ ಹೊಸ ದಿಕ್ಕು ತೋರಿಸಲಿದೆ. ಆದರೆ ನಮ್ಮದು ರಾಜಕೀಯ ಪಕ್ಷವಲ್ಲ. ರಂಗ ( ಮೋರ್ಚಾ) ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜೇವಾಲ್ ಮಾತನಾಡಿ, ರಾಜ್ಯದಲ್ಲಿ ರಾಜಕೀಯ ಬದಲಾವಣೆ ತರಲು ಈ ನಿರ್ಧಾರ ಕೈಗೊಂಡಿದ್ದೇವೆ. 177 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದ್ದಾರೆ. ಮೈತ್ರಿ ಮಾಡಿಕೊಳ್ಳುವುದರ ಕುರಿತಾಗಿ ಯಾವುದೇ ತೀರ್ಮಾನಿಸಿಲ್ಲ ಎಂದಿದ್ದಾರೆ.