Publish Date: Thu, 07 Dec 2017 (11:39 IST)
Updated Date: Thu, 07 Dec 2017 (11:42 IST)
ತಮಿಳುನಾಡಿನ ತಿರುಚಿರಾಪಳ್ಳಿಯ ತಾವರನ್ ಕುರಚ್ಚಿಯಲ್ಲಿ ನಿಂತಿದ್ದ ಲಾರಿಗೆ ವ್ಯಾನೊಂದು ಡಿಕ್ಕಿ ಹೊಡೆದ ಪರಿಣಾಮ ಒಂಭತ್ತು ಮಂದಿ ಸ್ಥಳದಲ್ಲಿಯೇ ಮೃತಪಟ್ಟ ಭೀಕರ ಘಟನೆ ನಡೆದಿದೆ.
ಅಪಘಾತದಲ್ಲಿ ಮೂವರು ಮಕ್ಕಳು ಮತ್ತು ಇಬ್ಬರು ಮಹಿಳೆಯರೂ ಸೇರಿದಂತೆ ಒಂಭತ್ತು ಮಂದಿ ಮೃತಪಟ್ಟಿದ್ದಾರೆ. ಕನ್ಯಾಕುಮಾರಿಯಿಂದ ತಿರುಪತಿ ಮಾರ್ಗವಾಗಿ ತಿರುಚಿರಾಪಳ್ಳಿಗೆ ತೆರಳುತ್ತಿದ್ದ ವ್ಯಾನ್ ರಸ್ತೆ ಬದಿ ನಿಂತಿದ್ದ ಲಾರಿಗೆ ಅಪ್ಪಳಿಸಿದ್ದರಿಂದ ಈ ದುರಂತ ಸಂಭವಿಸಿದೆ.
ಘಟನೆಯಲ್ಲಿ ಗಾಯಗೊಂಡ ಇತರೆ ನಾಲ್ವರನ್ನು ತಿರುಚಿರಾಪಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.