ಮುಂಬೈ: ಬೇಲಿಯೇ ಎದ್ದು ಹೊಲ ಮೇಯ್ದ ಸ್ಥಿತಿ ಈ ಬಾಲಕಿಯದ್ದಾಗಿದೆ. ಹೆತ್ತ ತಂದೆ ಸೇರಿದಂತೆ ಮನೆಯ ಗಂಡು ಮಕ್ಕಳಿಂದ 11 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳವಾಗಿದೆ.
ತಂದೆ ಮತ್ತು ಅಣ್ಣ ಅತ್ಯಾಚಾರವೆಸಗಿದ್ದು, ಚಿಕ್ಕಪ್ಪ, ಅಜ್ಜ ಲೈಂಗಿಕ ಕಿರುಕುಳ ನೀಡಿರುವುದಾಗಿ ಬಾಲಕಿ ಹೇಳಿದ್ದಾಳೆ. ಶಾಲೆಯಲ್ಲಿ ಶಿಕ್ಷಕರು ಗುಡ್ ಟಚ್ ಬ್ಯಾಡ್ ಟಚ್ ಬಗ್ಗೆ ಹೇಳುವಾಗ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಬಾಲಕಿ ಬಾಯ್ಬಿಟ್ಟಿದ್ದಾಳೆ.
ಬಳಿಕ ಶಿಕ್ಷಕರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಆದರೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ.