Webdunia - Bharat's app for daily news and videos

Install App

ತಾಯಿ ಮೇಲಿನ ಸಿಟ್ಟಿಗೆ ಮಗಳ ಕೊಂದ ತಂದೆ

Webdunia
ಭಾನುವಾರ, 12 ಡಿಸೆಂಬರ್ 2021 (08:40 IST)
ಚೆನ್ನೈ: ಪತ್ನಿಯೊಂದಿಗೆ ಕೌಟುಂಬಿಕ ಕಲಹ ಮಾಡಿಕೊಂಡಿದ್ದ ಪತಿ ಅದೇ ಸಿಟ್ಟಿನಲ್ಲಿ 7 ವರ್ಷದ ಮುಗ್ಧ ಮಗಳನ್ನು ಕೊಂದು ಹಾಕಿದ ಹೇಯ ಘಟನೆ ಚೆನ್ನೈನಲ್ಲಿ ನಡೆದಿದೆ

ಘಟನೆ ನಡೆದ ದಿನ ಆರೋಪಿ ತಡವಾಗಿ ಮನೆಗೆ ಬಂದಿದ್ದ. ಈ ಸಮಯದಲ್ಲಿ ಪತ್ನಿ ಮನೆಯಲ್ಲಿರಲಿಲ್ಲ. ಆಕೆ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು.

ಈ ವೇಳೆ ಪತ್ನಿಯ ಮೇಲೆ ಸಂಶಯಗೊಂಡ ಪತಿ ನಾನು ಮನೆಯಲ್ಲಿಲ್ಲದ ವೇಳೆ ಯಾರೆಲ್ಲಾ ಮನೆಗೆ ಬರುತ್ತಿದ್ದರು ಎಂದು ಮಗಳನ್ನು ಪ್ರಶ್ನೆ ಮಾಡಿದ್ದಾನೆ. ಸರಿಯಾಗಿ ಉತ್ತರ ಸಿಗದೇ ಇದ್ದಾಗ ಚಾಕುವಿನಿಂದ ಮಗಳಿಗೆ ಇರಿದಿದ್ದಾನೆ. ಇದರಿಂದಾಗಿ ಆಕೆ ಸಾವನ್ನಪ್ಪಿದ್ದಾಳೆ. ಗದ್ದಲ ಕೇಳಿ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ಬಂದು ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದರೂ ಜೀವವುಳಿಯಲಿಲ್ಲ. ಆರೋಪಿ ನಾಪತ್ತೆಯಾಗಿದ್ದು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments