Select Your Language

Notifications

webdunia
webdunia
webdunia
webdunia

ತಂದೆ, ಅಣ್ಣನಿಂದಲೇ ಅತ್ಯಾಚಾರ!

ತಂದೆ, ಅಣ್ಣನಿಂದಲೇ ಅತ್ಯಾಚಾರ!
ಮುಂಬೈ , ಶನಿವಾರ, 23 ಏಪ್ರಿಲ್ 2022 (08:11 IST)
ಮುಂಬೈ : ಅಣ್ಣ, ತಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ಆಕೆಯ ಅಜ್ಜ ಹಾಗೂ ಚಿಕ್ಕಪ್ಪ ಕಳೆದ 5 ವರ್ಷಗಳಿಂದ ಕಿರುಕುಳ ನೀಡಿದ ಘಟನೆ ಪುಣೆದಲ್ಲಿ ನಡೆದಿದೆ.
 
11 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಸಹೋದರ, ಸಂತ್ರಸ್ತೆಯ ತಂದೆ (45) ಪ್ರತ್ಯೇಕವಾಗಿ ಅತ್ಯಾಚಾರವೆಸಗಿದ್ದಾರೆ. ಇದರ ಜೊತೆಗೆ ಆಕೆಯ ಅಜ್ಜ(60) ಹಾಗೂ ಚಿಕ್ಕಪ್ಪ (25) ಕಳೆದ 5 ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು.

ಸಂತ್ರಸ್ತೆ ಹಾಗೂ ಆಕೆಯ ಕುಟುಂಬದವರು ಮೂಲತಃ ಬಿಹಾರದವರಾಗಿದ್ದು, ಸದ್ಯ ಪುಣೆಯಲ್ಲಿ ವಾಸಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಇನ್ಸ್ಪೆಕ್ಟರ್ ಅಶ್ವಿನಿ ಸತ್ಪುಟೆ ಮಾತನಾಡಿ, ಬಾಲಕಿಯು ತನ್ನ ಶಾಲೆಯಲ್ಲಿ ಗುಡ್ ಟಚ್ ಹಾಗೂ ಬ್ಯಾಡ್ ಟಚ್ ಚರ್ಚೆಯಲ್ಲಿ ಮಾತನಾಡುವಾಗ ಈ ಘಟನೆ ಬೆಳಕಿಗೆ ಬಂದಿದೆ.

ಕಳೆದ 5 ವರ್ಷಗಳಿಂದ ನಿರಂತರವಾಗಿ ಆಕೆಯ ಮೇಲೆ ಅತ್ಯಾಚಾರ ಹಾಗೂ ಕಿರುಕುಳ ನಡೆಯುತ್ತಿದೆ ಎಂದು ತಿಳಿಸಿದರು.  ಎಲ್ಲಾ ಘಟನೆಗಳು ಪ್ರತ್ಯೇಕವಾಗಿ ಸಂಭವಿಸಿರುವುದರಿಂದ ಮತ್ತು ಆರೋಪಿಗಳು ಪರಸ್ಪರರ ಕೃತ್ಯಗಳ ಬಗ್ಗೆ ತಿಳಿದಿರದ ಕಾರಣ, ಇದು ಸಾಮೂಹಿಕ ಅತ್ಯಾಚಾರದ ಪ್ರಕರಣವಲ್ಲ ಎಂದು ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಧ್ವನಿವರ್ಧಕ ವಿಚಾರದಲ್ಲಿ ಕೋರ್ಟ್ ಆದೇಶ ಏನು?