Publish Date: Thu, 04 Oct 2018 (08:50 IST)
Updated Date: Thu, 04 Oct 2018 (08:51 IST)
ನವದೆಹಲಿ: ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗುವ ಘಟನೆಗಳು ಇತ್ತೀಚೆಗೆ ವ್ಯಾಪಕವಾಗುತ್ತಿದೆ. ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಅಂತಹದ್ದೇ ಘಟನೆ ನಡೆದಿದೆ.
17 ವರ್ಷದ ಅಪ್ರಾಪ್ತ ಯುವತಿ ಮೇಲೆ ಕಳೆದ ಕೆಲವು ವರ್ಷಗಳಿಂದ ತಂದೆಯೇ ನಿರಂತರವಾಗಿ ಅತ್ಯಾಚಾರವೆಸಗಿದ್ದ ಘಟನೆ ಬೆಳಕಿಗೆ ಬಂದಿದೆ. ವಿಪರ್ಯಾಸವೆಂದರೆ ಈ ಯುವತಿ ತನ್ನ ಪ್ರಿಯಕರನ ಜತೆ ಮನೆ ಬಿಟ್ಟು ಓಡಿಹೋದ ಬಗ್ಗೆ ಪೊಲೀಸರಿಗೆ ದೂರು ನೀಡಿದಾಗಲೇ ಘಟನೆ ಬೆಳಕಿಗೆ ಬಂದಿರುವುದು.
ಪ್ರಿಯಕರನ ಜತೆ ಓಡಿ ಹೋಗಿದ್ದ ಸಂತ್ರಸ್ತ ಯುವತಿಯನ್ನು ವಿಚಾರಣೆ ನಡೆಸಿದಾಗ 2008 ರಿಂದ ಈಚೆಗೆ ತನ್ನ ತಂದೆ ತನ್ನ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದ. ಇದನ್ನು ತಾಯಿಗೆ ತಿಳಿಸಿದ್ದೆ. ಈ ಬಗ್ಗೆ ತಾಯಿ ತಂದೆಯನ್ನು ಪ್ರಶ್ನಿಸಿದಾಗ ಆತ ನಮ್ಮಿಬ್ಬರಿಗೂ ಬೆದರಿಕೆ ಹಾಕಿದ್ದ. ಈ ನಡುವೆ ನನಗೆ ಎರಡು ಬಾರಿ ಗರ್ಭಪಾತ ಮಾಡಲಾಗಿದೆ. ತಂದೆಯ ಕಿರುಕುಳ ತಾಳಲಾರದೆ ಓಡಿ ಹೋಗಿದ್ದಾಗಿ ಯುವತಿ ಹೇಳಿಕೊಂಡಿದ್ದಾಳೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.