ಮಧ‍್ಯಪ್ರದೇಶ: ನಾಗರಿಕ ಸಮಾಜವೇ ತಲೆತಗ್ಗಿಸುವ ಸುದ್ದಿಯಿದು. ವಿಕಲಚೇತನಾಗಿರುವ ತಂದೆ 14 ವರ್ಷದ ಮಗಳನ್ನೇ ಕೊಂದು ಆಕೆಯ ಶವದ ಮೇಲೆ ಲೈಂಗಿಕ ಕ್ರಿಯೆ ನಡೆಸಿ ವಿಕೃತಿ ಮೆರೆದಿದ್ದಾನೆ.
ವಿಕೃತ ಕಾಮಿಯಾಗಿದ್ದ ತಂದೆ ಮಗಳನ್ನು ಕೊಂದು ಅತ್ಯಾಚಾರ ನಡೆಸಿದ್ದಾನೆ. ಈ ಸಂಬಂಧ 40 ವರ್ಷದ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಇಷ್ಟೆಲ್ಲಾ ಕೃತ್ಯವೆಸಗಿ ತನ್ನ ಮಗಳು ನಾಪತ್ತೆಯಾಗಿದ್ದಾಳೆಂದು ತಂದೆ ಪೊಲೀಸರಿಗೆ ದೂರು ನೀಡಿದ್ದ. ಆತನ ವರ್ತನೆಯಿಂದ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿತ್ತು. ಕೊಲೆಗೂ ಮೊದಲು ಮಗಳ ಮೇಲೆ ಅತ್ಯಾಚಾರವೆಸಗಿದ್ದ. ಆದರೆ ಮಗಳು ಎಲ್ಲರಿಗೂ ವಿಷಯ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದಾಗ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದ. ಅಷ್ಟಕ್ಕೇ ಸುಮ್ಮನಾಗದೇ ಶವದ ಮೇಲೂ ಲೈಂಗಿಕ ಕ್ರಿಯೆ ನಡೆಸಿದ್ದಾನೆ.