Webdunia - Bharat's app for daily news and videos

Install App

ಗಡಿಯಲ್ಲಿ ಹೆಚ್ಚಿದ ಯುದ್ಧಭೀತಿ: ಪ್ರಧಾನಿ ಮೋದಿಯನ್ನು ತುರ್ತಾಗಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ ಎ.ಪಿ. ಸಿಂಗ್

Sampriya
ಭಾನುವಾರ, 4 ಮೇ 2025 (14:12 IST)
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ವಾಯುಸೇನೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ನೌಕಾ ಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಸಹ ಶನಿವಾರ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಅರಬ್ಬೀ ಸಮುದ್ರದಲ್ಲಿ ಸದ್ಯದ ಪರಿಸ್ಥಿತಿ ಬಗ್ಗೆ ವಿವರಿಸಿದ್ದರು.  ಮೋದಿ ಜೊತೆ ಏರ್ ಚೀಫ್ ಮಾರ್ಷಲ್ ಸಭೆ ನಡೆಸಿದ್ದಾರೆ ಎಂದಷ್ಟೇ ಮೂಲಗಳು ತಿಳಿಸಿದ್ದು, ಆ ಕುರಿತಂತೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ಮರುದಿನ ನಡೆದ ಭದ್ರತೆ ಕುರಿತ ಸಂಪುಟ ಸಮಿತಿಯ (ಸಿಸಿಎಸ್‌) ಸಭೆಯಲ್ಲಿ ಉಗ್ರ ದಾಳಿಗೆ ಬಲವಾಗಿ ಪ್ರತಿಕ್ರಿಯಿಸಲು ತಂತ್ರ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಸರ್ಕಾರವು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆಯ ಪರಮಾಧಿಕಾರವನ್ನು ನೀಡಿತ್ತು.

ಶುಕ್ರವಾರ ಉತ್ತರ ಪ್ರದೇಶದ ಗಂಗಾ ಎಕ್ಸ್‌ಪ್ರೆಸ್‌ವೇ ಉದ್ದಕ್ಕೂ ವಾಯುಪಡೆ ಫ್ಲೈಪಾಸ್ಟ್ ಮತ್ತು ಯುದ್ಧ ತಾಲೀಮನ್ನು ನಡೆಸಿತ್ತು. ಈ ತಾಲೀಮಿನ ಭಾಗವಾಗಿ, ಐಎಎಫ್ ಶಹಜಹಾನ್‌ಪುರದಲ್ಲಿರುವ 3.5 ಕಿ. ಮೀ ವ್ಯಾಪ್ತಿಯ ಏರ್‌ಸ್ಟ್ರಿಪ್‌ನಲ್ಲಿ ಟೇಕಾಫ್ ಮತ್ತು ಲ್ಯಾಂಡಿಂಗ್ ಕಾರ್ಯಾಚರಣೆಗಳನ್ನು ನಡೆಸಿತ್ತು. ಇದು ನಿರ್ಮಾಣ ಹಂತದಲ್ಲಿರುವ ಗಂಗಾ ಎಕ್ಸ್‌ಪ್ರೆಸ್‌ವೇ ಯೋಜನೆಯ ಭಾಗವಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments