Publish Date: Sun, 12 Feb 2023 (09:41 IST)
Updated Date: Sun, 12 Feb 2023 (10:43 IST)
ದಿಸ್ಪುರ್ : ಅಸ್ಸಾಂ ಸರ್ಕಾರ ಬಾಲ್ಯವಿವಾಹ ವಿರುದ್ಧ ಕಠಿಣ ಕಾರ್ಯಾಚರಣೆ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ತನ್ನ ಪತಿಯನ್ನು ಬಂಧಿಸುತ್ತಾರೆ ಅಂತಾ ಹೆದರಿ 3 ತಿಂಗಳ ಹಿಂದೆಯಷ್ಟೇ ಮದುವೆಯಾದ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮಹಿಳೆಯನ್ನ ದಕ್ಷಿಣ ಸಾಲ್ಮರ ಪೊಲೀಸ್ ಠಾಣಾ ವ್ಯಾಪ್ತಿಯ ಕಮರ್ ಪದ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಮಹಿಳೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಅಸ್ಸಾಂ ಸರ್ಕಾರ ಕಠಿಣ ಕಾರ್ಯಾಚರಣೆ ಕೈಗೊಂಡ ಬಳಿಕ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ 2ನೇ ಪ್ರಕರಣ ಇದಾಗಿದೆ.