Webdunia - Bharat's app for daily news and videos

Install App

ಆಫೀಸಿಗೆ ಬನ್ನಿ ಎಂದಿದ್ದಕ್ಕೆ ಮಹಿಳಾ ಟೆಕ್ಕಿಗಳು ಸಾಮೂಹಿಕ ರಾಜೀನಾಮೆ!

Webdunia
ಬುಧವಾರ, 14 ಜೂನ್ 2023 (09:28 IST)
ನವದೆಹಲಿ : ಮಹಾಮಾರಿ ಕೊರೊನಾ ವೈರಸ್ನಿಂದಾಗಿ ದೇಶಾದ್ಯಂತ ವರ್ಕ್ ಫ್ರಂ ಹೋಮ್ ಜಾರಿಗೆ ತರಲಾಗಿತ್ತು. ಇದೀಗ ಕಂಪನಿಯೊಂದು ವರ್ಕ್ ಫ್ರಂ ಹೋಂ ಸಾಕು, ಆಫೀಸಿಗೆ ಬಂದು ಕೆಲಸ ಮಾಡಿ ಎಂದು ಸೂಚನೆ ನೀಡಿದೆ.
 
ಈ ಬೆನ್ನಲ್ಲೇ ಮಹಿಳಾ ಟೆಕ್ಕಿಗಳು ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿರುವ ವಿಚಾರವೊಂದು ಬೆಳಕಿಗೆ ಬಂದಿದೆ. ಹೌದು. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪನಿಯು ಆಫೀಸಿಗೆ ಬಂದು ಕೆಲಸ ಮಾಡುವಂತೆ ತನ್ನ ಉದ್ಯೋಗಿಗಳಿಗೆ ಸೂಚನೆ ನೀಡಿದೆ. ಕಳೆದ ಮೂರು ವರ್ಷಗಳಿಂದ ಮನೆಯಿಂದ ಕಲಸ ಮಾಡುತ್ತಿದ್ದೀರ. ಇನ್ಮೇಲೆ ಕಡ್ಡಾಯವಾಗಿ ಆಫೀಸಿಗೆ ಬಂದು ಕೆಲಸ ಮಾಡುವಂತೆ ಕಂಪನಿ ಹೇಳಿದೆ.

ಈ ಸೂಚನೆ ಹೊರ ಬೀಳುತ್ತಿದ್ದಂತೆಯೇ ಮಹಿಳಾ ಟೆಕ್ಕಿಗಳು ಇಂತಹ ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿಯಾಗಿದೆ. ಈ ಸಂಬಂಧ ಟಿಸಿಎಸ್ ಮಾನವ ಸಂಪನ್ಮೂಲ ಮುಖ್ಯಸ್ಥ ಮಿಲಿಂದ್ ಲಕ್ಕಡ್ ಮಾತನಾಡಿ, ಕಂಪನಿಯು ಮನೆಯಿಂದಲೇ ಕೆಲಸ ಮಾಡಿದ್ದು ಸಾಕು, ಕಚೇರಿಗೆ ಬಂದು ಕಾರ್ಯ ನಿರ್ವಹಿಸಿ ಎಂದು ಹೇಳಿದ ನಂತರ ಅನೇಕ ಮಂದಿ ಉದ್ಯೋಗಿಗಳಿಂದ ರಾಜೀನಾಮೆ ಪತ್ರಗಳು ಬಂದವು.

ಅದರಲ್ಲಿ ಹೆಚ್ಚಿನದ್ದು ಮಹಿಳೆಯರ ರಾಜೀನಾಮೆ ಪತ್ರಗಳೇ ಆಗಿವೆ. ಆದರೆ ಈ ಮಹಿಳಾ ಉದ್ಯೋಗಿಗಳ ರಾಜೀನಾಮೆಯು ತಾರತಮ್ಯದಿಂದ ಪ್ರೇರಿತವಾಗಿಲ್ಲ. ಸಾಮಾನ್ಯವಾಗಿ ಟಿಸಿಎಸ್ ಕಂಪನಿಯಲ್ಲಿ ಹಿಂದೆಲ್ಲ ಪುರುಷರಿಗಿಂತ ಮಹಿಳೆಯರು ರಾಜೀನಾಮೆ ನೀಡುವ ಪ್ರಮಾಣ ಕಡಿಮೆ ಇತ್ತು. ಆದರೆ ಈ ಬಾರಿ ಮಾತ್ರ ಪುರುಷರಿಗಿಂತ ಮಹಿಳೆಯರೇ ಹೆಚ್ಚು ರಾಜೀನಾಮೆ ಕೊಟ್ಟಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments