Select Your Language

Notifications

webdunia
webdunia
webdunia
webdunia

ಅಸ್ಸಾಂನಲ್ಲಿ ಭೀಕರ ಪರಿಸ್ಥಿತಿ ನಿರ್ಮಾಣ

ಅಸ್ಸಾಂನಲ್ಲಿ ಭೀಕರ ಪರಿಸ್ಥಿತಿ ನಿರ್ಮಾಣ
Guwahati , ಭಾನುವಾರ, 25 ಜೂನ್ 2017 (11:23 IST)
ಗುವಾಗಟಿ: ಅಸ್ಸಾಂನಲ್ಲಿ ಭೀಕರ ನೆರೆ ಹಾವಳಿಯಿಂದಾಗಿ 87,500 ಕ್ಕೂ ಅಧಿಕ ಮಂದಿ ಸಂತ್ರಸ್ತರಾಗಿದ್ದಾರೆ. ಲಖಿಂಪುರ್, ಕರೀಂಗಂಜ್ ಮತ್ತು ಸೋನಿಟ್ ಪುರ್ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ.

 
ವಿಪತ್ತು ನಿರ್ವಹಣಾ ಕೇಂದ್ರದ ಅಂದಾಜು ಪ್ರಕಾರ ಸುಮಾರು 131 ಗ್ರಾಮಗಳು ಪ್ರವಾಹಕ್ಕೀಡಾಗಿವೆ.  148 ಹೆಕ್ಟೇರ್ ಬೆಳೆ ಪ್ರದೇಶ ಹಾನಿಗೀಡಾಗಿದೆ ಎಂದು ಅಂದಾಜಿಸಲಾಗಿದೆ. 82 ಸಾವಿರಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ ಎಂದು ತಿಳಿದು ಬಂದಿದೆ.

ಓರ್ವ ಮಹಿಳೆ ಸಾವನ್ನಪ್ಪಿದ್ದು, ಜನರು ಆಶ್ರಯಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಇನ್ನಷ್ಟು ಹೆಚ್ಚಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪಾಕಿಸ್ತಾನ ಗೆದ್ದಿದ್ದಕ್ಕೆ ಸಂಭ್ರಮಾಚರಣೆ ಮಾಡಿದ್ದ ಯುವಕನ ಪರ ವಕಾಲತ್ತು ವಹಿಸಲು ವಕೀಲರ ನಕಾರ