Publish Date: Mon, 06 May 2019 (07:34 IST)
Updated Date: Mon, 06 May 2019 (07:41 IST)
ನವದೆಹಲಿ : ಇಂದು ಐದನೇ ಹಂತದ ಚುನಾವಣೆಗೆ ದೇಶದ ಒಟ್ಟು 7 ರಾಜ್ಯಗಳ 51 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ.
ಉತ್ತರ ಪ್ರದೇಶದ 14 ಕ್ಷೇತ್ರ, ರಾಜಸ್ತಾನದ 12, ಪಶ್ಚಿಮ ಬಂಗಾಳ, ಮಧ್ಯಪ್ರದೇಶದಲ್ಲಿ ತಲಾ ಏಳು ಹಾಗೂ ಬಿಹಾರದಲ್ಲಿನ 5, ಜಾರ್ಖಂಡ್ ನಲ್ಲಿನ 4 ಹಾಗೂ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಹಾಗೂ ಲಡಾಖ್ ಸೇರಿ ಒಟ್ಟು 7 ರಾಜ್ಯಗಳ 51 ಲೋಕಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸ್ಮೃತಿ ಇರಾನಿ, ಅಮಿತ್ ಶಾ, ಸೋನಿಯಾಗಾಂಧಿ, ರಾಜನಾಥ್ ಸಿಂಗ್, ರಾಜವರ್ಧನ್ ಸಿಂಗ್ ರಾಥೋಡ್ ಮುಂತಾದ ಘಾಟಾನುಘಟಿ ನಾಯಕರ ಭವಿಷ್ಯ ಇಂದು ನಿರ್ಧಾರವಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ