Select Your Language

Notifications

webdunia
webdunia
webdunia
webdunia

ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್ಐಆರ್ ದಾಖಲು

ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್ಐಆರ್ ದಾಖಲು
ಲಕ್ನೋ , ಬುಧವಾರ, 6 ಸೆಪ್ಟಂಬರ್ 2023 (14:28 IST)
ಲಕ್ನೋ : ಸನಾತನ ಧರ್ಮವನ್ನು ಟೀಕೆ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್ಐಆರ್ ದಾಖಲಾಗಿದೆ.
 
ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಕರೆ ನೀಡಿದ್ದರು. ಇವರ ಹೇಳಿಕೆಯನ್ನು ಖರ್ಗೆ ಬೆಂಬಲಿಸಿದ್ದರು. ಹೀಗಾಗಿ ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗೆ ಧಕ್ಕೆ) ಹಾಗೂ 153 ಎ (ಗುಂಪುಗಳ ನಡುವೆ ದ್ವೇಷಕ್ಕೆ ಉತ್ತೇಜನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಿಯಾಂಕ್ ಖರ್ಗೆ ಜೊತೆ ಉದಯನಿಧಿ ವಿರುದ್ಧವೂ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕರ ಅನಗತ್ಯ ಪತ್ರ ವ್ಯವಹಾರಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್?