Webdunia - Bharat's app for daily news and videos

Install App

ಬೆಂಕಿ ಅವಘಡ : ನಾಲ್ವರು ಭಾರತೀಯರು ಸೇರಿದಂತೆ 16 ಮಂದಿ ಸಾವು

Webdunia
ಸೋಮವಾರ, 17 ಏಪ್ರಿಲ್ 2023 (14:07 IST)
ದುಬೈ : ದುಬೈನ ದೇರಾ ಬುರ್ಜ್ ಮುರಾರ್ ಪ್ರದೇಶದ ಅಪಾರ್ಟ್ಮೆಂಟ್ನಲ್ಲಿ ನಡೆದ ಬೆಂಕಿ ಅವಘಡದಲ್ಲಿ ನಾಲ್ವರು ಭಾರತೀಯರು  ಸೇರಿದಂತೆ 16 ಮಂದಿ ಜನರು ಸಾವನ್ನಪ್ಪಿದ್ದಾರೆ.
 
ನಗರದ ಹಳೆಯ ಭಾಗದಲ್ಲಿರುವ ಅಲ್-ರಾಸ್ ಸಮೀಪವಿರುವ ಕಟ್ಟಡದ 4ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೂಲಗಳ ಪ್ರಕಾರ ಕೇರಳ ಮತ್ತು ತಮಿಳುನಾಡಿನ ತಲಾ ಇಬ್ಬರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಕೇರಳ ಮೂಲದ ರಿಜೇಶ್ (38) ಮತ್ತು ಅವರ ಪತ್ನಿ ಜಿಶಿ (32) ಹಾಗೂ ಇನ್ನಿಬ್ಬರು ತಮಿಳುನಾಡು ಮೂಲದ ಅಬ್ದುಲ್ ಖಾದರ್ ಮತ್ತು ಸಲಿಯಾಕುಂಡ್ ಎಂದು ಗುರುತಿಸಲಾಗಿದೆ.

ಮೃತರು ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ದಂಪತಿ ಹಾಗೂ ತಮಿಳುನಾಡಿನ ಇಬ್ಬರು ವ್ಯಕ್ತಿಗಳಾಗಿದ್ದರು. ಜೊತೆಗೆ 3 ಪಾಕಿಸ್ತಾನಿ ಸೋದರಸಂಬಂಧಿಗಳು ಮತ್ತು ನೈಜೀರಿಯಾದ ಮಹಿಳೆಯೂ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದಾರೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿ ಶಾಮಕ ದಳವು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯವನ್ನು ಆರಂಭಿಸಿತು. ಈ ವೇಳೆ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮುಂದಿನ ಸುದ್ದಿ
Show comments