Webdunia - Bharat's app for daily news and videos

Install App

ಫಿರೋಜಾಬಾದ್ನಲ್ಲಿ ಅಗ್ನಿ ಅವಘಡ ! ಮಕ್ಕಳು ಸೇರಿ ಕುಟುಂಬದ 6 ಮಂದಿ ಸಾವು

Webdunia
ಬುಧವಾರ, 30 ನವೆಂಬರ್ 2022 (08:43 IST)
ಲಕ್ನೋ : ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಕಟ್ಟಡದ ನೆಲಮಹಡಿಯಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರು ಸಾವನ್ನಪ್ಪಿದ್ದಾರೆ.
 
ಕುಟುಂಬದ ಇತರ ಮೂವರು ಸದಸ್ಯರು ಕೂಡ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಇನ್ವರ್ಟರ್ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ ಶೀಘ್ರದಲ್ಲೇ ಕುಟುಂಬ ವಾಸಿಸುತ್ತಿದ್ದ ಮಹಡಿಗೆ ವ್ಯಾಪಿಸಿತು. 18 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ಮಾಡಿತು ಎಂದು ಫಿರೋಜಾಬಾದ್ನ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ತಿವಾರಿ ಹೇಳಿದ್ದಾರೆ.

ಕಾರ್ಖಾನೆಯಲ್ಲಿನ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂಬ ಅನುಮಾನವಿದ್ದು, ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅವಘಡದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವ ಚೆಸ್ ಚಾಂಪಿಯನ್ ದಿವ್ಯಾಗೆ ಬಿಗ್ ಸರ್ಪ್ರೈಸ್‌: ಮಹಾರಾಷ್ಟ್ರ ಸಿಎಂರಿಂದ ದೊಡ್ಟಮೊತ್ತದ ಬಹುಮಾನ

ಇಯರ್‌ಫೋನ್ ಧರಿಸಿ ರೈಲು ಹಳಿ ದಾಟುತ್ತಿದ್ದ ಬಾಲಕ ರೈಲು ಡಿಕ್ಕಿ ಹೊಡೆದು ಸಾವು

ಕೋರ್ಟ್ ನಲ್ಲಿ ಕಣ್ಣೀರಿಡುತ್ತಾ ಪ್ರಜ್ವಲ್ ರೇವಣ್ಣ ಹೇಳಿದ್ದೇನು, ಸಂಪೂರ್ಣ ವಿವರ ಇಲ್ಲಿದೆ

ರಾಹುಲ್ ಗಾಂಧಿ ಮತಗಳವು ಪ್ರತಿಭಟನೆಗೆ ಬೆಂಗಳೂರಿನಲ್ಲಿ ಮರಗಳಿಗೆ ಕತ್ತರಿ

ಧರ್ಮಸ್ಥಳ ಕೇಸ್ ಗೆ ಇಂದು ಮಹತ್ವದ ತಿರುವು ಗ್ಯಾರಂಟಿ

ಮುಂದಿನ ಸುದ್ದಿ
Show comments