Select Your Language

Notifications

webdunia
webdunia
webdunia
webdunia

ಮುಂಬೈ: ರಿಸರ್ವ್ ಬ್ಯಾಂಕ್ ಕಟ್ಟಡದಲ್ಲಿ ಬೆಂಕಿ

ಮುಂಬೈ: ರಿಸರ್ವ್ ಬ್ಯಾಂಕ್ ಕಟ್ಟಡದಲ್ಲಿ ಬೆಂಕಿ
ಮುಂಬೈ , ಶುಕ್ರವಾರ, 4 ಸೆಪ್ಟಂಬರ್ 2015 (11:33 IST)
ಮುಂಬೈನಲ್ಲಿರುವ ರಿಸರ್ವ್‌ ಬ್ಯಾಂಕ್ ಆಫ್ ಇಂಡಿಯಾ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬಾಂದ್ರಾದ ಕುರ್ಲಾದಲ್ಲಿರುವ ಕಟ್ಟಡದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ.

ಕಟ್ಟಡದ ನಾಲ್ಕನೇ ಅಂತಸ್ತಿನಲ್ಲಿ ಇಂದು ಮುಂಜಾನೆ 8.30ರ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ.
 
ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ದಾಖಲೆಗಳು ಸುಟ್ಟ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಹೊರಬಿದ್ದಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
 
10 ಫೈರ್ ಎಂಜಿನ್‌ಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ಇನ್ನು ಬಹಿರಂಗವಾಗಬೇಕಿದೆ.

Share this Story:

Follow Webdunia kannada