Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಕಚೇರಿಗೆ ಬೆಂಕಿ

webdunia
ಮಂಗಳವಾರ, 17 ಅಕ್ಟೋಬರ್ 2017 (08:55 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಮಂತ್ರಿ ಕಚೇರಿಯ ಎರಡನೇ ಮಹಡಿಯಲ್ಲಿ  ಇಂದು ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎನ್ನಲಾಗಿದೆ.

 
ಬೆಳಗಿನ ಜಾವ 3.45 ರ ಸುಮಾರಿಗೆ ಪ್ರಧಾನ ಮಂತ್ರಿ ಕಾರ್ಯಾಲಯ ಎರಡನೇ ಮಹಡಿಯ ಕೊಠಡಿ ಸಂಖ್ಯೆ 242 ರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸುದ್ದಿ ಮಾಧ್ಯಮ ವರದಿ ಮಾಡಿದೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, 20 ನಿಮಿಷದೊಳಗೆ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ರಕ್ಷಣಾ ಸಿಬ್ಬಂದಿಗಳು ಹೇಳಿದ್ದಾರೆ. ಕಂಪ್ಯೂಟರ್ ನ ಯುಪಿಎಸ್ ನಲ್ಲಿ ಸ್ಪಾರ್ಕ್ ಉಂಟಾಗಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ರಕ್ಷಣಾ ಸಿಬ್ಬಂದಿಗಳು ಹೇಳಿದ್ದಾರೆ. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ರಚನೆ