Webdunia - Bharat's app for daily news and videos

Install App

ಲಕ್ಷ್ಮೀಬಾಯಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ: ಮತ್ತೆರಡು ಮಕ್ಕಳು ಸಾವು, ಸಾವಿನ ಸಂಖ್ಯೆ 17ಕ್ಕೆ ಏರಿಕೆ

Sampriya
ಭಾನುವಾರ, 24 ನವೆಂಬರ್ 2024 (14:46 IST)
ಲಖನೌ: ‌ಝಾನ್ಸಿ ನಗರದ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಂಭವಿಸಿದ್ದ ಅಗ್ನಿ ಅವಘಡದ ವೇಳೆ ರಕ್ಷಣೆಯಾದ 39ಮಕ್ಕಳ ಪೈಕಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಈ ದುರ್ಘಟನೆಯಲ್ಲಿ ಮೃತಪಟ್ಟ ಶಿಶುಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ನವೆಂಬರ್ 15 ರ ರಾತ್ರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ದುರ್ಘಟನೆಯಲ್ಲಿ 10 ನವಜಾತ ಶಿಶುಗಳು ಸಜೀವ ದಹನಗೊಂಡಿದ್ದವು. ಅಲ್ಲದೆ, 39 ಮಕ್ಕಳನ್ನು ರಕ್ಷಣೆ ಮಾಡಲಾಗಿತ್ತು.

ಈ ಸಂಬಂಧ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ ನರೇಂದ್ರ ಸಿಂಗ್ ಸೆಂಗಾರ್  ಪ್ರತಿಕ್ರಿಯಿಸಿ, ರಕ್ಷಣೆಯಾದ  39 ಶಿಶುಗಳ ಪೈಕಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆಂದು ಹೇಳಿದರು.

ಇಬ್ಬರು ಮಕ್ಕಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸಾವಿಗೆ ಅನಾರೋಗ್ಯ ಕಾರಣ ಎಂದು ತಿಳಿದುಬಂದಿದೆ. ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಎರಡೂ ಶಿಶುಗಳ ಜನನ ತೂಕ 800 ಗ್ರಾಂ ಇತ್ತು. ಒಂದು ಮಗುವಿನ ಹೃದಯದಲ್ಲಿ ರಂಧ್ರವಿತ್ತು ಎಂದು ಮಾಹಿತಿ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments