Select Your Language

Notifications

webdunia
webdunia
webdunia
webdunia

ದೆಹಲಿಯ ಹೋಟೆಲ್ ನಲ್ಲಿ ಅಗ್ನಿ ದುರಂತ; ಸಾವಿನ ಸಂಖ್ಯೆ 17ಕ್ಕೆ ಏರಿಕೆ

ದೆಹಲಿಯ ಹೋಟೆಲ್ ನಲ್ಲಿ ಅಗ್ನಿ ದುರಂತ; ಸಾವಿನ ಸಂಖ್ಯೆ 17ಕ್ಕೆ ಏರಿಕೆ
ನವದೆಹಲಿ , ಮಂಗಳವಾರ, 12 ಫೆಬ್ರವರಿ 2019 (12:02 IST)
ನವದೆಹಲಿ : ಇಂದು ಮುಂಜಾನೆ ಕರೋಲ್​ ಭಾಗ್ ​ನಲ್ಲಿರುವ ಹೋಟೆಲ್​ ಅರ್ಪಿತ್​ ಪ್ಯಾಲೇಸ್​ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಈ ಘಟನೆಯಲ್ಲಿ 17 ಮಂದಿ ಸಾವನಪ್ಪಿದ್ದಾರೆ.


ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಬೆಳಗ್ಗೆ 4:30ರ ಸುಮಾರಿಗೆ ಹೋಟೆಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್​ನ 40 ಕೋಣೆಗಳವರೆಗೆ ಭಾರಿ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿರುವ ಕಾರಣ ಮೃತರ ಸಂಖ್ಯೆಯ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ
ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈಗಾಗಲೆ 35 ಜನರನ್ನು ರಕ್ಷಿಸಲಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

420 ಎಂದಿದ್ದಕ್ಕೆ ಕ್ಷಮೆ ಕೇಳದಿದ್ರೆ ನಿಮ್ಮ ಹಗರಣಗಳನ್ನು ಬಿಚ್ಚಿಡುತ್ತೇನೆ- ರೇವಣ್ಣಗೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ