Webdunia - Bharat's app for daily news and videos

Install App

ಹೋಳಿ ಹಬ್ಬದ ದಿನವೇ ಉಜ್ಜೈನಿ ಮಹಾಕಾಳೇಶ್ವರ ದೇವಾಲಯದಲ್ಲಿ ಅಗ್ನಿ ಅವಘಡ

Krishnaveni K
ಸೋಮವಾರ, 25 ಮಾರ್ಚ್ 2024 (11:10 IST)
Photo Courtesy: Twitter
ಉಜ್ಜೈನಿ: ಹೋಳಿ ಹಬ್ಬದ ದಿನವೇ ಉಜ್ಜೈನಿ ಮಹಾಕಾಳೇಶ್ವರ ದೇವಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 13 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಹೋಳಿ ಹಬ್ಬದ ಅಂಗವಾಗಿ ದೇವಾಲಯದ ಗರ್ಭಗುಡಿಯಲ್ಲಿ ಭಸ್ಮಾರತಿ ಸೇವೆ ನೆರವೇರಿಸಲಾಗುತ್ತಿತ್ತು. ಈ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಐವರು ಅರ್ಚಕರು ಮತ್ತು ನಾಲ್ವರು ಭಕ್ತರು ಸೇರಿದಂತೆ 13 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಹೋಳಿ ಹಬ್ಬದ ದಿನವೇ ಇಂತಹದ್ದೊಂದು ದುರ್ಘಟನೆ ನಡೆದಿರುವುದು ವಿಪರ್ಯಾಸ.  ಭಸ್ಮ ಆರತಿ ವೇಳೆ ಮಹಾಕಾಳನಿಗೆ ಗುಲಾಲ್ ಅರ್ಪಿಸಲಾಗುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಶೇಷವೆಂದರೆ ಈ ಸಂದರ್ಭದಲ್ಲಿ ಸಿಎಂ ಮೋಹನ್ ಯಾದವ್ ಕುಟುಂಬಸ್ಥರೂ ದೇವಾಲಯದಲ್ಲಿದ್ದರು. ಇಂದು ಹೋಳಿ ನಿಮಿತ್ತ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಬಂದಿದ್ದರು. ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments