Webdunia - Bharat's app for daily news and videos

Install App

ತಮಿಳುನಾಡಿನಲ್ಲಿ ನಿಲ್ಲುತ್ತಿಲ್ಲ ಪಟಾಕಿ ದುರಂತ: ಆರು ಮಂದಿ ಸಜೀವ ದಹನ, ಹಲವರು ಸಿಲುಕಿರುವ ಶಂಕೆ

Sampriya
ಶನಿವಾರ, 4 ಜನವರಿ 2025 (14:12 IST)
Photo Courtesy X
ತಮಿಳುನಾಡು: ತಮಿಳುನಾಡಿನಲ್ಲಿ ಪಟಾಕಿ ದುರಂತಗಳು ಒಂದಂರ ಮೇಲೆ ಒಂದು ನಡೆಯುತ್ತಲೇ ಇದೆ. ಇಲ್ಲಿನ ವಿರುಧುನಗರ ಜಿಲ್ಲೆಯ ಸತ್ತೂರು ಪ್ರದೇಶದಲ್ಲಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಇಂದು ಸ್ಫೋಟ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಹಲವರು ಸಿಲುಕಿಕೊಂಡಿದ್ದು, ಆರು ಮಂದಿಯ ಶವ ಪತ್ತೆಯಾಗಿದೆ. ಬಹುತೇಕ ಶವಗಳು ಸುಟ್ಟು ಕರಕಲಾಗಿವೆ. ಇನ್ನೂ ಹಲವು ಮಂದಿ ದುರಂತದಲ್ಲಿ ಸಿಲುಕಿರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಆರು ಪುರುಷರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಅವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ.  ಶವಗಳನ್ನು ಶವಪರೀಕ್ಷೆಗಾಗಿ ವಿರುಧುನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ಸಂಭವಿಸಿದ ಮೊದಲ ಪಟಾಕಿ ಅಪಘಾತ ಇದಾಗಿದೆ.

ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕಾರ್ಖಾನೆ ಪರವಾನಗಿ ಹೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಸಾಯನಿಕಗಳನ್ನು ಬೆರೆಸುವ ಪ್ರಕ್ರಿಯೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೇ 9 ರಂದು ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ್ದ ಭಾರೀ ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments