ರೈಲು ಅಪಘಾತಕ್ಕೆ ಐವರು ಬಲಿ!

Webdunia
ಮಂಗಳವಾರ, 12 ಏಪ್ರಿಲ್ 2022 (09:52 IST)
ಅಮರಾವತಿ : ಆಂಧ್ರಪ್ರದೇಶದಲ್ಲಿ ಕೊನಾರ್ಕ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ದಾರುಣವಾಗಿ ಮೃತಪಟ್ಟಿದ್ದಾರೆ.

ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದ ಬಳಿ ಸೋಮವಾರ ತಡರಾತ್ರಿ ಈ ಅವಘಡ ಸಂಭವಿಸಿದೆ. ಕೊಯಮತ್ತೂರು- ಸಿಲ್ಚಾರ್ ಎಕ್ಸ್ಪ್ರೆಸ್ ರೈಲಿನಿಂದ ಸಿಗಡಮ್ -ಚಿಪುರುಪಲ್ಲಿ ನಿಲ್ದಾಣಗಳ ನಡುವೆ ಇಳಿದು ಪಕ್ಕದ ಹಳಿಯತ್ತ ಪ್ರಯಾಣಿಕರು ಓಡಲು ಪ್ರಯತ್ನಿಸುತ್ತಿದ್ದರು.

ಈ ವೇಳೆ ಅದೇ ಹಳಿಯಲ್ಲಿ ವೇಗವಾಗಿ ಬಂದ ಭುವನೇಶ್ವರ-ಮುಂಬೈ ಕೊನಾರ್ಕ್ ರೈಲು, ಹಳಿಯ ಮೇಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಪರಿಣಾಮ 5 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಐವರ ಮೃತದೇಹಗಳ ಗುರುತು ಪತ್ತೆ ಮಾಡಲಾಗಿದೆ. ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿ ಶ್ರೀಕಾಕುಳಂ ಜಿ. ಆರ್ ರಾಧಿಕಾ ಮಾಹಿತಿ ನೀಡಿದ್ದಾರೆ. 

ವಿಶಾಖಪಟ್ಟಣ-ಪಲಾಸ ಮುಖ್ಯ ಮಾರ್ಗದ ಮಧ್ಯಭಾಗದಲ್ಲಿ ಘಟನೆ ನಡೆದಿದ್ದು, ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments