Webdunia - Bharat's app for daily news and videos

Install App

ಸ್ನೇಹಿತನ ಮದುವೆಗೆ ಬಂದಿದ್ದ ಐವರು ವೈದ್ಯಕೀಯ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್‌ನಲ್ಲಿ ಮುಳುಗಿ ಸಾವು

Sampriya
ಸೋಮವಾರ, 6 ಮೇ 2024 (19:06 IST)
ಕನ್ಯಾಕುಮಾರಿ: ಇಲ್ಲಿನ  ಗಣಪತಿಪುರಂನ ಲೆಮೂರ್  ಸಮುದ್ರದಲ್ಲಿ ಈಜಾಡಲು ಹೋದ ಐವರು ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ  ನಡೆದಿದೆ.

ಮೃತರು ತಮ್ಮ ಸ್ನೇಹಿತನ ಮದುವೆಗೆ ತಿರುಚಿರಾಪಳ್ಳಿಯಿಂದ ಬಂದಿದ್ದರು.

ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗ ಅವಘಡ ಸಂಭವಿಸಿದೆ. ಎಂಟು ಜನರ ಪೈಕಿ ಐವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.


ಮೃತರನ್ನು ಕನ್ಯಾಕುಮಾರಿ ಮೂಲದ ಸರ್ವದರ್ಶಿತ್ (23), ದಿಂಡಿಗಲ್ ಮೂಲದ ಪ್ರವೀಣ್ ಸ್ಯಾಮ್ (23), ನೇವೇಲಿ ಮೂಲದ ಗಾಯತ್ರಿ (25), ಆಂಧ್ರಪ್ರದೇಶದ ವೆಂಕಟೇಶ್ (24) ಮತ್ತು ತಂಜಾವೂರು ಮೂಲದ ಚಕ್ರವರ್ತಿ (23) ಎಂದು ಗುರುತಿಸಲಾಗಿದೆ.

ನಿನ್ನೆ ಇದೇ ಕಡಲತೀರದಲ್ಲಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.  ಸಮುದ್ರದಲ್ಲಿ ಅಪಾಯದ ಮುನ್ಸೂಚನೆಯಿಂದ ಅಧಿಕಾರಿಗಳು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಆದರೂ ಕಳೆದ ಎರಡು ದಿನಗಳಲ್ಲಿ ಲೆಮೂರ್ ಕಡಲತೀರದಲ್ಲಿ ಒಟ್ಟು ಎಂಟು ಜನರು ನೀರಿನಲ್ಲಿ ಮುಳುಗಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments