Select Your Language

Notifications

webdunia
webdunia
webdunia
webdunia

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಿದ ಕೇಂದ್ರ ಚುನಾವಣೆ ಆಯೋಗ

ವಿಧಾನಸಭೆ ಚುನಾವಣೆ 2017
ನವದೆಹಲಿ , ಬುಧವಾರ, 4 ಜನವರಿ 2017 (12:48 IST)
ಉತ್ತರಪ್ರದೇಶ, ಪಂಜಾಬ್, ಮಣಿಪುರ್, ಗೋವಾ ಮತ್ತು ಉತ್ತರಾಖಂಡ್ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಚುನಾವಣೆ ಆಯೋಗ ದಿನಾಂಕ ಘೋಷಿಸಿದೆ.
 
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣೆ ಆಯುಕ್ತ ನಸೀಮ್ ಜೈದಿ, 5 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ 16 ಕೋಟಿ ಮತದಾರರು ಮತದಾನ ಮಾಡಲಿದ್ದು 690 ಶಾಸಕರನ್ನು ಆಯ್ಕೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
 
ಒಂದೇ ಹಂತದಲ್ಲಿ ಎಲ್ಲಾ ರಾಜ್ಯಗಳಲ್ಲಿ ಚುನಾವಣೆಗಳು ನಡೆಯಲಿವೆ, ಗೋವಾದ 40 ಕ್ಷೇತ್ರಗಳಿಗೆ, ಪಂಜಾಬ್‌ನ 117 ಕ್ಷೇತ್ರಗಳಿಗೆ ಫೆಬ್ರವರಿ 4 ರಂದು ಮತದಾನ ನಡೆಯಲಿದೆ. 
 
ಉತ್ತರಾಖಂಡ್‌ನ 70 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು ಫೆಬ್ರವರಿ 15 ರಂದು ಮತದಾನ ನಡೆಯಲಿದೆ.
 
ಮಣಿಪುರದ 60 ಕ್ಷೇತ್ರಗಳಿಗೆ ಎರಡು ಹಂತದ ಮತದಾನ ನಡೆಯಲಿದ್ದು, ಮಾರ್ಚ್ 4 ರಂದು 38 ವಿಧಾನಸಭೆ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು . ಮಾರ್ಚ್ 8 ರಂದು ನಡೆಯುವ ಎರಡನೇ ಹಂತದಲ್ಲಿ 22 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
 
ಉತ್ತರಪ್ರದೇಶದ 403 ವಿಧಾನಸಭೆ ಕ್ಷೇತ್ರಗಳಿಗಾಗಿ ಏಳು ಹಂತದ ಮತದಾನ ನಡೆಯಲಿದೆ. ಫೆಬ್ರವರಿ 11, ಫೆಬ್ರವರಿ 15, ಫೆಬ್ರವರಿ 19,ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 4 ಮತ್ತು ಮಾರ್ಚ್ 8 ರಂದು ಮತದಾನ ನಡೆಯಲಿದೆ.    
 
ಐದು ರಾಜ್ಯಗಳಲ್ಲಿ ಒಟ್ಟು 1 ಲಕ್ಷ 85 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಮಹಿಳೆಯರಿಗಾಗಿ ಪ್ರತ್ಯೇಕ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ
 
ಉತ್ತರಪ್ರದೇಶ, ಪಂಜಾಬ್, ಮಣಿಪುರ, ಗೋವಾ ಮತ್ತು ಉತ್ತರಾಖಂಡ್ ರಾಜ್ಯಗಳಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.
 
ಮಾರ್ಚ್ 11 ಕ್ಕೆ ಐದು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣೆ ಆಯೋಗದ ಆಯುಕ್ತ ನಸೀಮ್ ಜೈದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಫ್ಲಿಪ್‍ಕಾರ್ಟ್‌ನಲ್ಲಿ ರೂ.9,900ಕ್ಕೆ ಆಪಲ್ ಐಫೋನ್!