Webdunia - Bharat's app for daily news and videos

Install App

ಐದು ವರ್ಷದ ಬಾಲೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಕಾಮುಕ

Webdunia
ಶುಕ್ರವಾರ, 3 ಏಪ್ರಿಲ್ 2015 (15:22 IST)
ಐದು ವರ್ಷದ ಕಂದಮ್ಮನನ್ನು ಅಪಹರಿಸಿ ಪ್ರತಿಷ್ಠಿತ ಡಿಎಲ್‌ಎಫ್- ಫೇಸ್-1 ರ ಪ್ರದೇಶದಲ್ಲಿ ಅತ್ಯಾಚಾರವೆಸಗಿದ  ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

ಚಕ್ರಪುರ ಗ್ರಾಮದಲ್ಲಿ ಬಾಲಕಿಯ ನೆರೆಮನೆಯಲ್ಲಿದ್ದ ಆರೋಪಿ ಶರ್ಮಾ ಯಾದವ್(32) ಐದು ವರ್ಷದ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ  ಕರೆದುಕೊಂಡು ಹೋಗಿ ಭೀಕರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಆಯುಕ್ತ ನವದೀಪ್ ಸಿಂಗ್ ವಿರ್ಕ್ ತಿಳಿಸಿದ್ದಾರೆ.

ಬಾಲಕಿಯ ರೋಧನವನ್ನು ಕೇಳಿದ ಅಕ್ಕಪಕ್ಕದ ಜನ ಸೇರಿ ಆರೋಪಿಯ ಮೇಲೆ ಹಲ್ಲೆ ಮಾಡಿದ್ದಲ್ಲದೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ಕಳುಹಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಬಾಲಕಿಯ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡ ನಿರಂತರವಾಗಿ ಎರಡು ಗಂಟೆಗಳ ಕಾಲ ಪ್ರಯತ್ನಿಸಿ ಸಫಲರಾಗಿದ್ದಾರೆ. ಮುಂದಿನ 10 ದಿನಗಳ ನಂತರ ಬಾಲಕಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸುವುದಾಗಿ ಹೇಳಿದ್ದಾರೆ.

ವೃತ್ತಿಯಲ್ಲಿ ಪೇಂಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಆರೋಪಿ ಯಾದವ್, ಬಾಲಕಿ ಏಕಾಂಗಿಯಾಗಿರುವುದು ಕಂಡು ಆಕೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದೇನೆ ಎಂದು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ. ಬಾಲಕಿಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು ಅವರು ಆಕೆಯನ್ನು ಗುರುತಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments