Select Your Language

Notifications

webdunia
webdunia
webdunia
webdunia

ಅಸ್ಸಾಂನಲ್ಲಿ ಮುಂದುವರಿದ ಪ್ರವಾಹ ಪರಿಸ್ಥಿತಿ: 24 ಲಕ್ಷಕ್ಕೂ ಹೆಚ್ಚು ಮಂದಿ ಬಾಧಿತ

Himanta Biswan Sharma

Sampriya

ಗುವಾಹಟಿ , ಭಾನುವಾರ, 7 ಜುಲೈ 2024 (13:20 IST)
Photo Courtesy X
ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಭಾನುವಾರವೂ ಮುಂದುವರೆದಿದೆ. 53,000ಕ್ಕೂ ಹೆಚ್ಚು ಜನರು 577 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ.

ರಾಜ್ಯದ 29 ಜಿಲ್ಲೆಗಳಲ್ಲಿ ಸುಮಾರು 24 ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ.  ಬ್ರಹ್ಮಪುತ್ರ ಸೇರಿದಂತೆ ರಾಜ್ಯದ ಹಲವೆಡೆ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಪ್ರವಾಹ ಪರಿಸ್ಥಿತಿಯಿಂದ ನಿನ್ನೆ 6 ಜನರು ಮೃತಪಟ್ಟಿದ್ದಾರೆ. ಈ ವರ್ಷ ಪ್ರವಾಹ, ಭೂಕುಸಿತ, ಬಿರುಗಾಳಿಗಳಲ್ಲಿ ಮೃತಪಟ್ಟವರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾನ್‌ ಶರ್ಮಾ ಅವರು ಶುಕ್ರವಾರ ಮತ್ತು ಶನಿವಾರ ದಿಬ್ರುಗಢ ಸೇರಿ ಹಲವು ಜಿಲ್ಲೆಗಳ ವಿವಿಧೆಡೆ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಚಂದಾಪುರದ ಆಸ್ಪತ್ರೆಯ ಆಕ್ಸಿಜನ್ ಘಟಕ ಸ್ಫೋಟ, ಭಾರೀ ಸದ್ದಿಗೆ ಬೆಚ್ಚಿಬಿದ್ದ ರೋಗಿಗಳು