Publish Date: Thu, 13 Jul 2023 (12:09 IST)
Updated Date: Thu, 13 Jul 2023 (12:12 IST)
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಬ್ಯಾರೇಜ್ ನೀರು ಬಿಡುವುದನ್ನು ನಿಲ್ಲಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ. ಆದರೆ ಕೇಂದ್ರ ಬ್ಯಾರೇಜ್ನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವುದು ಅಗತ್ಯವಾಗಿದೆ ಎಂದು ಹೇಳಿದೆ.
ಹಿಮಾಚಲ ಪ್ರದೇಶದಲ್ಲಿ ಮುಂಗಾರು ಅವಾಂತರವನ್ನೇ ಸೃಷ್ಟಿಸಿದ್ದು, ಭಾರೀ ಪ್ರಮಾಣದ ನಾಶವಾಗಿದೆ. ಉತ್ತರ ಭಾಗದಲ್ಲಿ ಭಾರೀ ಮಳೆಯಿಂದಾಗಿ ಬ್ಯಾರೇಜ್ ತುಂಬಿದ್ದು, ಈ ಹಿನ್ನೆಲೆ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ದೆಹಲಿಯಾದ್ಯಂತ ರಸ್ತೆ, ಮನೆಗಳಿಗೆ ನೀರು ನುಗ್ಗಿದೆ.