Webdunia - Bharat's app for daily news and videos

Install App

ಮೂರು ತಿಂಗಳಲ್ಲಿ ಮೂರನೇ ಬಾರಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇಳಿಕೆ

sampriya
ಶನಿವಾರ, 1 ಜೂನ್ 2024 (19:26 IST)
Photo By X
ನವದೆಹಲಿ: ಜೂನ್‌ 1ರಿಂದ ದೇಶದಾದ್ಯಂತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇಳಿಕೆ ಕಂಡಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕಿಲೋಗ್ರಾಂ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ₹ 69.50 ಇಳಿಕೆಯನ್ನು ಘೋಷಿಸಿವೆ.

ಪರಿಷ್ಕೃತ ದರ ತಕ್ಷಣದಿಂದ ಜಾರಿಗೆ ಬರಲಿದೆ. ಇಂದಿನಿಂದ ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ₹ 1,676ಕ್ಕೆ ಸಿಗಲಿದೆ.   

ಮೇ 1 ರಂದು, ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ₹ 19 ಇಳಿಸಿತ್ತು. ಅಂದರೆ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಆಗ ದೆಹಲಿಯಲ್ಲಿ 1745.50 ಸಿಗುತ್ತಿತ್ತು.

ಅಲ್ಲದೆ, ಏಪ್ರಿಲ್‌ನಲ್ಲಿ 19 ಕೆಜಿಯ ವಾಣಿಜ್ಯ ಸಿಲಿಂಡರ್‌ಗೆ ₹ 30.50 ಕಡಿತಗೊಳಿಸಿತ್ತು. ಈ ತಿಂಗಳ ಆರಂಭದಲ್ಲಿ ಅದನ್ನು ಸರಿ ಹೊಂದಿಸಲು ಮತ್ತೆ ಇಳಿಕೆ ಮಾಡಿದೆ.

ಬೆಲೆ ಇಳಿಕೆಗೆ ನಿಖರವಾದ ಕಾರಣಗಳನ್ನು ಬಹಿರಂಗಪಡಿಸದಿದ್ದರೂ, ಅಂತರರಾಷ್ಟ್ರೀಯ ತೈಲ ಬೆಲೆಗಳಲ್ಲಿನ ಏರಿಳಿತಗಳು, ತೆರಿಗೆ ನೀತಿಗಳಲ್ಲಿನ ಬದಲಾವಣೆಗಳು ಮತ್ತು ಪೂರೈಕೆ-ಬೇಡಿಕೆಯಂತಹ ಅಂಶಗಳಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments