ನವದೆಹಲಿ : ಬಲವಂತದ ಧಾರ್ಮಿಕ ಮತಾಂತರವು ರಾಷ್ಟ್ರೀಯ ಸುರಕ್ಷತೆ ಹಾಗೂ ಧರ್ಮದ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವ ಗಂಭೀರ ಸಮಸ್ಯೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ನ್ಯಾಯಾಧೀಶರಾದ ಎಂ.ಆರ್ ಶಾ ಮತ್ತು ಹಿಮಾ ಕೊಹ್ಲಿ ಅವರ ದ್ವಿಸದಸ್ಯ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಚಾರಣೆ ನಡೆಸಿತ್ತು.
ಈ ವೇಳೆ ಬೆದರಿಕೆ ಹಾಕುವ ಮೂಲಕ ಅಥವಾ ಹಣ ಹಾಗೂ ಉಡುಗೊರೆಯ ಆಮಿಷವೊಡ್ಡಿ ಜನರನ್ನು ಮತಾಂತರಗೊಳಿಸುವುದರಿಂದ ರಾಷ್ಟ್ರದ ಭದ್ರತೆಗೆ ತೊಂದರೆ ಉಂಟಾಗಲಿದೆ.
ಈ ಹಿನ್ನೆಲೆಯಲ್ಲಿ ಬಲವಂತದ ಮತಾಂತರಗಳನ್ನು ತಡೆಯಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಕುರಿತು ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.