Select Your Language

Notifications

webdunia
webdunia
webdunia
webdunia

ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ!

ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ!
ಲಕ್ನೋ , ಶನಿವಾರ, 1 ಸೆಪ್ಟಂಬರ್ 2018 (07:02 IST)
ಲಕ್ನೋ : ಹೊಲಿಗೆ ತರಗತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ 16 ವರ್ಷದ ಅಪ್ರಾಪ್ತ ಹುಡುಗಿಯನ್ನ ಅಪಹರಿಸಿ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ನೋಯ್ದಾದಲ್ಲಿ ನಡೆದಿದೆ.


ಸಂತ್ರಸ್ತೆ ಗೌತಮ್ ಬುದ್ಧನಗರ ಜಿಲ್ಲೆಯ ಜಸ್ವರ ಸಮೀಪದ ದಸ್ತಂಪೂರ್ ಗ್ರಾಮದ ನಿವಾಸಿಯಾಗಿದ್ದು ಮನೆಯ ಸಮೀಪವಿದ್ದ ಹೊಲಿಗೆ ತರಗತಿ ಹೋಗುತ್ತಿದ್ದಳು. ಆಗಸ್ಟ್ 24 ರಂದು ತರಗತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಆಕೆಯನ್ನು ಅಪಹರಿಸಿದ್ದಾರೆ. ಬಳಿಕ ಆಕೆಗೆ ಬಲವಂತವಾಗಿ ಮದ್ಯಪಾನ ಮಾಡುವಂತೆ ಒತ್ತಾಯಿಸಿದ್ದಾರೆ. ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ನಂತರ ಮರುದಿನ ಬೆಳಿಗ್ಗೆ ಸಂತ್ರಸ್ತೆಯನ್ನು ಆಕೆಯ ಮನೆಯ ಮುಂದೆ ಎಸೆದು ಹೋಗಿದ್ದಾರೆ.


ಮಗಳನ್ನು ನೋಡಿದ ತಂದೆ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿ ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾಹಕರನ್ನು ಹೆಚ್ಚು ಸೆಳೆಯುತ್ತಿದ್ದಕ್ಕೆ ವೇಶ್ಯೆಯೊಬ್ಬಳಿಂದ ಇನ್ನೊಬ್ಬ ವೇಶ್ಯೆಯ ಕೊಲೆ !