Publish Date: Fri, 16 Oct 2020 (10:12 IST)
Updated Date: Fri, 16 Oct 2020 (10:17 IST)
ಪುದುಚೇರಿ : ಮಹಿಳಾ ಸಹದ್ಯೋಗಿಗೆ ಲೈಂಗಿಕ ಕಿರುಕುಳ ಹಾಗೂ ಹಿಂಬಾಲಿಸಿದ ಆರೋಪದ ಮೇಲೆ ಭಾರತೀಯ ಅರಣ್ಯ ಸೇವೆ ಅಧಿಕಾರಿಯೊಬ್ಬರ ವಿರುದ್ಧ ಪುದುಚೇರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಅಧಿಕಾರಿಯನ್ನು ದಿನೇಶ್ ಕಣ್ವನ್ ಎಂದು ಗುರುತಿಸಲಾಗಿದೆ. ಮಹಿಳೆಯ ಜೊತೆ ಕಚೇರಿಯಲ್ಲಿ ಅಸಭ್ಯವಾಗಿ ವರ್ತಿಸುವುದಲ್ಲದೇ, ಆಕೆಯನ್ನು ಹಿಂಬಾಲಿಸಿಕೊಂಡು ಬರುತ್ತಿದ್ದ ಎನ್ನಲಾಗಿದೆ.
ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ದಾಖಲಿಸಿದ ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲಿಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.