ನವದೆಹಲಿ: ಲೋಕಸಭೆ ಚುನಾವಣೆ 2024 ರ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ಭಾರತೀಯ ಜನತಾ ಪಕ್ಷ ಶನಿವಾರ ಪ್ರಕಟಿಸಿದೆ.
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು 27 ಮಂದಿ ಸದಸ್ಯರ ಸಮಿತಿಯ ಸದಸ್ಯರ ಹೆಸರನ್ನು ಘೋಷಿಸಿದರು. ಸಮಿತಿ ನೇತೃತ್ವದ ಹೊಣೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಹಿಸಲಾಗಿದೆ.
ಸಮಿತಿಯ ಸಂಚಾಲಕರಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸಹ ಸಂಚಾಲಕರಾಗಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ನೇಮಿಸಲಾಗಿದೆ.
ಅರ್ಜುನ್ ಮುಂಡಾ, ಭೂಪೇಂದರ್ ಯಾದವ್, ಅರ್ಜುನ್ ರಾಮ್ ಮೇಘವಾಲ್, ಕಿರಣ್ ರಿಜಿಜು, ಅಶ್ವಿನಿ ವೈಷ್ಣವ್, ಧರ್ಮೇಂದ್ರ ಪ್ರಧಾನ್ ಮತ್ತು ಭೂಪೇಂದರ್ ಪಟೇಲ್ ಅವರನ್ನು ಸಮಿತಿಯಲ್ಲಿ ಸದಸ್ಯರನ್ನಾಗಿ ಸೇರಿಸಲಾಗಿದೆ.
ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಕೂಡ ಪಟ್ಟಿಯಲ್ಲಿದ್ದಾರೆ.
ಇವರೊಂದಿಗೆ ಶಿವರಾಜ್ ಸಿಂಗ್ ಚೌಹಾಣ್, ವಸುಂಧರಾ ರಾಜೇ, ಸ್ಮೃತಿ ಇರಾನಿ, ಜುಯಲ್ ಓರಮ್, ರವಿಶಂಕರ್ ಪ್ರಸಾದ್, ಸುಶೀಲ್ ಮೋದಿ, ಕೇಶವ್ ಪ್ರಸಾದ್ ಮೌರ್ಯ, ರಾಜೀವ್ ಚಂದ್ರಶೇಖರ್, ವಿನೋದ್ ತಾವ್ಡೆ, ರಾಧಾ ಮೋಹನ್ ದಾಸ್ ಅಗರ್ವಾಲ್, ಮಂಜಿಂದರ್ ಸಿಂಗ್ ಸಿರ್ಸಾ, ಒಪಿ ಧಂಕರ್, ಅನಿಲ್ ಆಂಟನಿ ಮತ್ತು ತಾರಿಕ್ ಆಂಟನಿ.