Select Your Language

Notifications

webdunia
webdunia
webdunia
webdunia

ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಬಿಜೆಪಿಗೆ ಸೇರ್ಪಡೆ

ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಬಿಜೆಪಿಗೆ ಸೇರ್ಪಡೆ
ನವದೆಹಲಿ , ಶುಕ್ರವಾರ, 22 ಮಾರ್ಚ್ 2019 (14:05 IST)
ನವದೆಹಲಿ : ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿಯ ದೆಹಲಿ ಕಚೇರಿಯಲ್ಲಿ ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್ ಹಾಗೂ ಅರುಣ್ ಜೇಟ್ಲಿ, ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸಮ್ಮಖದಲ್ಲಿ ಗೌತಮ್ ಗಂಭೀರ ಬಿಜೆಪಿಗೆ ಸೇರಿದ್ದಾರೆ. ಬಿಜೆಪಿಯ ರಾಷ್ಟ್ರೀಯ ವಕ್ತಾರೆ, ಹಾಲಿ ಸಂಸದೆ ಮೀನಾಕ್ಷಿ ಲೇಖಿ ಅವರ ನವದೆಹಲಿ ಕ್ಷೇತ್ರವನ್ನು ಗೌತಮ್ ಗಂಭೀರ್ ಅವರಿಗೆ ಬಿಟ್ಟುಕೊಡಲು ಹೈಕಮಾಂಡ್ ಮುಂದಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

 

ಈ ಕುರಿತು  ಮಾತನಾಡಿದ ಗೌತಮ್ ಗಂಭೀರ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಆಲೋಚನೆಗಳಿಗೆ ನಾನು ಸ್ಫೂರ್ತಿಗೊಂಡಿರುವೆ. ಪಕ್ಷಕ್ಕೆ ಸೇರಲು ಅವಕಾಶ ನೀಡಿದಕ್ಕೆ ನಾನು ಧನ್ಯವಾದಗಳು ಎಂದು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಗೆ ಬಿಗ್ ಶಾಕ್ ; ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಲಿರುವ ಕಾಂಗ್ರೆಸ್ ನ ಹಿರಿಯ ಮುಖಂಡ