Webdunia - Bharat's app for daily news and videos

Install App

ಬಿಜೆಪಿಗೆ ಸೇರ್ಪಡೆಗೊಂಡ ಮಾಜಿ ಭಾರತೀಯ ರಾಯಭಾರಿ ತರಂಜಿತ್ ಸಿಂಗ್

Sampriya
ಮಂಗಳವಾರ, 19 ಮಾರ್ಚ್ 2024 (17:21 IST)
Photo Courtesy X
ನವದೆಹಲಿ: ಅಮೆರಿಕಾಕ್ಕೆ ಭಾರತೀಯ ರಾಯಭಾರಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ತರಂಜಿತ್ ಸಿಂಗ್ ಸಂಧು ಅವರು ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು. 
 
ಹಲವು ವರ್ಷಗಳಿಂದ ವಿದೇಶದಲ್ಲಿ ಭಾರತೀಯ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ ಸಂಧು ಅವರು ಬಿಜೆಪಿ ಅಭ್ಯರ್ಥಿಯಾಗಿ ಅಮೃತಸರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ. 
 
ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾಧ್ಯಮದ ಮುಂದೆ ಮಾತನಾಡಿದ ಅವರು, ಕಳೆದ 10 ವರ್ಷಗಳಲ್ಲಿ ನಾನು ಪ್ರಧಾನಿ ಮೋದಿಯವರ ನಾಯಕತ್ವದೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದೇನೆ. ವಿಶೇಷವಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು ಶ್ರೀಲಂಕಾದೊಂದಿಗಿನ ವ್ಯವಹಾರದಲ್ಲಿ ಕಾರ್ಯನಿರ್ವಹಿಸಿದ್ದೇನೆ. 
 
ಪ್ರಧಾನಿ ಮೋದಿ ಅವರು ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಇಂದು ಅಭಿವೃದ್ಧಿ ತುಂಬಾ ಅಗತ್ಯವಿದೆ, ಆ ಬೆಳವಣಿಗೆ ಅಮೃತಸರಕ್ಕೂ ತಲುಪಬೇಕು. ಹಾಗಾಗಿ, ನಾನು ರಾಜಕೀಯ ಪ್ರವೇಶಿಸುತ್ತಿದ್ದೇನೆ ಎಂದರು. ನನ್ನನ್ನು ಪ್ರೋತ್ಸಾಹಿಸಿದ ಪಕ್ಷದ ಅಧ್ಯಕ್ಷರು, ಪ್ರಧಾನ ಮಂತ್ರಿಗಳು, ಗೃಹ ಸಚಿವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments