ನವದೆಹಲಿ: ಮೆದುಳಿನ ಪಾರ್ಶ್ವವಾಯುವಿಗೆ ಒಳಗಾಗಿರುವ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೆನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 
 
									
			
			 
 			
 
 			
					
			        							
								
																	ಸದ್ಯ ಅವರು ವೆಂಟಿಲೇಟರ್ ಬೆಂಬಲದಲ್ಲಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
									
										
								
																	ಅವರನ್ನು ಒಂದು ತಿಂಗಳಿನಿಂದ ದೆಹಲಿಯ ಶ್ರೀ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಡ್ನಿ ಸಂಬಂಧಿತ ಸಮಸ್ಯೆಯಿಂದ ಜೂನ್ ಕೊನೆಯ ವಾರದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 
									
											
							                     
							
							
			        							
								
																	81 ವರ್ಷದ ಶಿಬು ಸೊರೆನ್  ಅವರು ದೀರ್ಘಕಾಲದಿಂದ ಆಸ್ಪತ್ರೆಯಲ್ಲಿ ನಿಯಮಿತವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೂನ್ 24 ರಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದರು. 
									
			                     
							
							
			        							
								
																	ಶಿಬು ಸೋರೆನ್ 38 ವರ್ಷಗಳಿಂದ ಜಾರ್ಖಂಡ್ ಮುಕ್ತಿ ಮೋರ್ಚಾವನ್ನು ಮುನ್ನಡೆಸಿದ್ದಾರೆ ಮತ್ತು ಪಕ್ಷದ ಸಂಸ್ಥಾಪಕ ಪೋಷಕರಾಗಿ ಗುರುತಿಸಿಕೊಂಡಿದ್ದಾರೆ.