Select Your Language

Notifications

webdunia
webdunia
webdunia
webdunia

ಸಂಸತ್ತಿನಲ್ಲಿ ಕುಸಿದು ಬಿದ್ದಿದ್ದ ಮಾಜಿ ಸಚಿವ ವಿಧಿವಶ

ಸಂಸತ್ತಿನಲ್ಲಿ ಕುಸಿದು ಬಿದ್ದಿದ್ದ ಮಾಜಿ ಸಚಿವ ವಿಧಿವಶ
ನವದೆಹಲಿ , ಬುಧವಾರ, 1 ಫೆಬ್ರವರಿ 2017 (07:59 IST)
ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾದ ಕೆಲವೇ ನಿಮಿಷಗಳಲ್ಲಿ ದಿಢೀರನೇ ಕುಸಿದು ಬಿದ್ದಿದ್ದ ಕೇರಳದ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಇ. ಅಹ್ಮದ್ ಅವರು ಇಂದು ನಸುಕಿನ ಜಾವ 2. 15 ಗಂಟೆಗೆ  ಕೊನೆಯುಸಿರೆಳೆದಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
ಕಲಾಪ ಆರಂಭಕ್ಕೂ ಮುನ್ನ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ಅಹ್ಮದ್ ಹೃದಯಾಘಾತಕ್ಕೊಳಗಾಗಿದ್ದರು. ತಕ್ಷಣ ಅವರನ್ನು ರಾಮ್ ಮನೋಹರ್ ಲೋಹಿಯಾ (ಆರ್'ಎಂಎಲ್) ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿವಶರಾಗಿದ್ದಾರೆ. 
 
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಷ್ಟ್ರೀಯ ಅಧ್ಯಕ್ಷರಾಗಿದ್ದ 78 ವರ್ಷದ ಇ. ಆಹ್ಮದ್ ಅವರು ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿಯಾಗಿದ್ದ ವೇಳೆ ವಿದೇಶಾಂಗ ಸಚಿವಾಲಯದ ಸಹಾಯಕ ಸಚಿವರಾಗಿ ಸೇವೆ ಸಲ್ಲಿಸಿದ್ದರು. 
 
ಪ್ರಸ್ತುತ ಮಲ್ಲಪ್ಪುರಂ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು.
 
ಅಹ್ಮದ್ ನಿಧನದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬಜೆಟ್ ಮಂಡನೆ ಮುಂದೂಡಿಕೆಯಾಗುವ ಸಾಧ್ಯತೆಗಳಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನೋಟ್ ನಿಷೇಧದ ಬಳಿಕ ಮೊದಲ ಬಜೆಟ್; ದೇಶಾದ್ಯಂತ ಕುತೂಹಲ